Online News in ಕನ್ನಡ

ಸಾಲು ಮರದ ತಿಮ್ಮಕ್ಕ ನಿಧನ : ಶತಾಯುಷಿಯ ಸಾರ್ಥಕ ಬದುಕು ಅಂತ್ಯ

ಬೆಂಗಳೂರು: ಮರಗಳನ್ನೇ ಮಕ್ಕಳಂತೆ ಸಲುಹಿ `ಸಾಲು ಮರದ ತಿಮ್ಮಕ್ಕ’ ಎಂಬು ಖ್ಯಾತರಾಗಿ, ಪಠ್ಯದಲ್ಲಿ ಪಾಠವಾಗಿ ಆದರ್ಶ ಬದುಕು ನಡೆಸಿದ ತಿಮ್ಮಕ್ಕ (114) ಅವರು ವಯೋಸಹಜ ಕಾಯಿಲೆಯಿಂದಾಗಿ ಶುಕ್ರವಾರ ಬೆಂಗಳೂರಿನ ಜಯನಗರದಲ್ಲಿರುವ ಅಪೋಲೊ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಹುಲಿಕಲ್ ಗ್ರಾಮದವರಾಗಿರುವ ತಿಮ್ಮಕ್ಕ ಅವರಿಗೆ ಪುತ್ರ ಪರಿಸರವಾದಿ ಉಮೇಶ್ ಬಳ್ಳೂರು (ಸಾಕುಮಗ) ಇದ್ದಾರೆ. ಸದ್ಯ ಬೆಂಗಳೂರಿನಲ್ಲಿ ಪುತ್ರನೊಂದಿಗೆ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಆಗಾಗ ಏರುಪೇರಾಗುತ್ತಿತ್ತು. ಅದರಂತೆ, ಅವರನ್ನು ಎರಡು ದಿನಗಳ ಹಿಂದೆ ಉಸಿರಾಟದ ತೀವ್ರ ಸಮಸ್ಯೆಯಿಂದಾಗಿ ಅವರನ್ನು ಅಪೋಲೋ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

Call Now Button