ಮೈಸೂರು: ಜಿಲ್ಲಾಡಳಿತದ ವತಿಯಿಂದ ಆಗಸ್ಟ್ 15 ರಂದು ಬೆಳಗ್ಗೆ 9 ಗಂಟೆಗೆ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ 79ನೇ ಸ್ವಾತಂತ್ರೋತ್ಸವ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಮುಖ್ಯ ಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರ ಘನ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪನವರು ಧ್ವಜಾರೋಹಣ ಮಾಡಲಿದ್ದು, ನರಸಿಂಹ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವರಾದ ಕೆ. ವೆಂಕಟೇಶ್, ಅರಣ್ಯ ವಸತಿ ಮತ್ತು ವಿಹಾರ ಧಾಮಗಳ ನಿಗಮದ ಅಧ್ಯಕ್ಷರು ಹಾಗೂ ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅನಿಲ್ ಕುಮಾರ್. ಸಿ., ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದ ಅಧ್ಯಕ್ಷರಾದ ಎ.ಬಿ. ರಮೇಶ್ ಬಂಡಿ ಸಿದ್ದೇಗೌಡ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪ ಅಮರನಾಥ್ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಮಾನಸ ಅವರು ಗೌರವ ಉಪಸ್ಥಿತರಿರಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾದ ಸುನೀಲ್ ಬೋಸ್ ಅವರು ಆಗಮಿಸಲಿದ್ದಾರೆ.
ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ. ದೇವೇಗೌಡ, ಕೃಷ್ಣರಾಜನಗರ ವಿಧಾನಸಭಾ ಶಾಸಕರಾದ ರವಿಶಂಕರ್ ಡಿ., ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ.ಎಸ್.ಶ್ರೀವತ್ಸ, ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ, ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ದೃವನಾರಾಯಣ್, ಹುಣಸೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಡಿ.ಹರೀಶ್ ಗೌಡ ಹಾಗೂ ವಿಧಾನ ಪರಿಷತ್ ಸದಸ್ಯರುಗಳಾದ ಹೆಚ್. ವಿಶ್ವನಾಥ್, ಡಾ. ಡಿ. ತಿಮ್ಮಯ್ಯ, ಸಿ.ಎನ್.ಮಂಜೇಗೌಡ, ಮಧು ಜಿ. ಮಾದೇಗೌಡ, ಡಾ. ಯತಿಂದ್ರ ಎಸ್., ಮತ್ತು ವಿವೇಕಾನಂದ ಎಸ್. ಅವರು ಸಮಾರಂಭದ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.
ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷರಾದ ಅಯೂಬ್ ಖಾನ್ ಹಾಗೂ ಕಾವೇರಿ ಜಲಾನಯನ ಯೋಜನೆಯ ಅಚ್ಚುಕಟ್ಟು ಪ್ರಾಧಿಕಾರದ ಅಧ್ಯಕ್ಷರಾದ ಮರಿಸ್ವಾಮಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಅಂದು ಸಂಜೆ 5 ಗಂಟೆಗೆ ಕರ್ನಾಟಕ ಕಲಾಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ. ಹರೀಶ್ ಗೌಡ ಅವರು ವಹಿಸಲಿದ್ದಾರೆ.


