Online News in ಕನ್ನಡ

ಭಾರತ-ರಷ್ಯ ಆರ್ಥಿಕತೆ ಸತ್ತಿದೆ: ಡೊನಾಲ್ಡ್ ಟ್ರಂಪ್

ಭಾರತದ ಎಲ್ಲಾ ಆಮದು ವಸ್ತುಗಳ ಮೇಲೆ ಶೇ.25 ರಷ್ಟು ಸುಂಕ ವಿಧಿಸಿದ ಕೆಲವೇ ಗಂಟೆಗಳಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ಮತ್ತು ರಷ್ಯಾದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ, ತಮ್ಮ ಸರ್ಕಾರ ಕಠಿಣ ನಿಲುವು ತೆಗೆದುಕೊಳ್ಳುತ್ತದೆ ಎಂದು ಎಚ್ಚರಿಸಿದ್ದಾರೆ.

ಅವರು ತಮ್ಮ ಟ್ರೂತ್ ಸೋಶಿಯಲ್ ಹ್ಯಾಂಡಲ್ ನಲ್ಲಿ ಪೋಸ್ಟ್ ಮಾಡಿ, ಭಾರತವು ರಷ್ಯಾದೊಂದಿಗೆ ಏನು ಮಾಡುತ್ತದೆ ಎಂಬುದು ನನಗೆ ಮುಖ್ಯವಲ್ಲ. ರಷ್ಯಾ ಮತ್ತು ಭಾರತ ಏನು ಮಾಡಲಿವೆ ಎಂಬುದರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದಿರುವ ಡೊನಾಲ್ಡ್‌ ಟ್ರಂಪ್‌, ಎರಡೂ ರಾಷ್ಟ್ರಗಳು ತಮ್ಮ ಸತ್ತ ಆರ್ಥಿಕತೆಗಳನ್ನು ಒಟ್ಟಿಗೆ ಹೂಳಲಿ ಎಂದು ವ್ಯಂಗ್ಯವಾಡಿದ್ದಾರೆ.

ಆಗಸ್ಟ್ 1 ರಿಂದ ಜಾರಿಗೆ ಬರುವಂತೆ ಭಾರತೀಯ ಸರಕುಗಳ ಮೇಲೆ ಶೇ. 25 ರಷ್ಟು ಸುಂಕ ವಿಧಿಸುವುದಾಗಿ ಟ್ರಂಪ್ ಘೋಷಿಸಿದ ನಂತರ ತಮ್ಮ ಪ್ರತಿಕ್ರಿಯೆ ಮುಂದುವರಿಸಿದ್ದಾರೆ. ಹೆಚ್ಚಿನ ವ್ಯಾಪಾರ ಅಡೆತಡೆಗಳು ಮತ್ತು ರಷ್ಯಾದಿಂದ ಮಿಲಿಟರಿ ಉಪಕರಣಗಳು ಮತ್ತು ಇಂಧನ ಖರೀದಿಯನ್ನು ಉಲ್ಲೇಖಿಸಿ ಅವರು ಈ ಹೇಳಿಕೆ ನೀಡಿದ್ದಾರೆ.

Call Now Button