ಹಾಸನ (ಶಕಲೇಶಪುರ), ಆಗಸ್ಟ್ 5-ಸಕಲೇಶಪುರದ ಸಹಾಯಕ ಪ್ರಾದೇಶಿಕ ಸಾರಿಗೆ (ಆರ್.ಟಿ.ಒ) ಕಛೇರಿಗೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾರ್ವಜನಿಕರು ಕಚೇರಿಗೆ ಬಂದಾಗ ಸಮಸ್ಯೆ ಗಳನ್ನು ಕಾಲಮಿತಿಯೊಳಗೆ ಬಗೆಹರಿಸಿ ಸೌಜನ್ಯಯುತವಾಗಿ ನಡೆಸಿಕೊಳ್ಳಬೇಕು. ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಆರ್.ಟಿ.ಒ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

