Online News in ಕನ್ನಡ

ಒಳಮೀಸಲಾತಿ: ಮೈಸೂರಿನಲ್ಲಿ ಬಲಗೈ ಸಮುದಾಯದಿಂದ ಬೃಹತ್‌ ಪ್ರತಿಭಟನೆ

ಮೈಸೂರು, ಆಗಸ್ಟ್‌ 14, 2025- ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ನೇತೃತ್ವದ ಏಕ ಸದಸ್ಯ ಆಯೋಗ ಒಳ ಮೀಸಲಾತಿ ಜಾರಿಯ ಹಿನ್ನಲ್ಲೆಯಲ್ಲಿ ಬಿಡುಗಡೆ ಮಾಡಿರುವ ವರದಿ ಅವೈಜ್ಞಾನಿಕವಾಗಿದ್ದು, ಪೂವಗ್ರಹ ಪೀಡಿತದಿಂದ ಕೂಡಿದೆ ಎಂದು ಆರೋಪಿಸಿ ಮೈಸೂರಿನಲ್ಲಿ ಬಲಗೈ ಸಮುದಾಯದ ಮುಖಂಡರು ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಗರದ ಪುರಭವನದ ಆವರಣದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.‌ ಅಂಬೇಡ್ಕರ್‌ ಪ್ರತಿಮೆಯ ಮುಂದೆ ಜಮಾಯಿಸಿದ ಬಲಗೈ ಪ್ರಮುಖರು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ವಿರುದ್ಧ ಘೋಷಣೆಗಳನ್ನು ಕೂಗಿ ಜಾತಿ ಜನಗಣತಿಯಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದು ಪ್ರತಿಪಾದಿಸಿದರು.

ನಂತರ ಕೋಟೆ ಆಂಜನೇಯಸ್ವಾಮಿ ದೇವಸ್ಥಾನ, ಕೆ.ಆರ್.ವೃತ್ತ, ಡಿ. ದೇವರಾಜ ಅರಸ್‌ ರಸ್ತೆಯ ಮೂಲಕ ಜಿಲ್ಲಾಧಿಕಾರಿ ಕಚೇರಿ ತಲುಪಿ ಮನವಿ ಪತ್ರಸಲ್ಲಿಸಲಾಯಿತು. ಗಾಂಧಿನಗರದ ಉರಿಲಿಂಗ ಪೆದ್ದಿ ಮಠದ ಮಠಾಧೀಶರಾದ ಜ್ಞಾನಪ್ರಕಾಶ ಸ್ವಾಮೀಜಿ ನೇತೃತ್ವದಲ್ಲಿ ದಲಿತ ಸಂಘಷ ಸಮಿತಿಯ ವಿವಿಧ ಬಣಗಳ ಮುಖಂಡರಾದ ಬೆಟ್ಟಯ್ಯ ಕೋಟೆ, ಸಂವಿಧಾನ ಸಂರಕ್ಷಣಾ ಸಮಿತಿಯ ಅಧ್ಯಕ್ಷ ಭಾಸ್ಕರ್‌, ವಕೀಲರಾದ ಉಮೇಶ್‌, ಸೋಸಲೆ ಸಿದ್ದರಾಜು ಸೇರಿದಂತೆ ಹಲವಾರು ಮಂದಿ ಭಾಗವಹಿಸಿದ್ದರು.

 

 

 

Call Now Button