Online News in ಕನ್ನಡ

ನಂಜನಗೂಡಿನಲ್ಲಿ ಭಗೀರಥ ಜಯಂತಿ; ಸಿದ್ಧತೆ ಪರಿಶೀಲಿಸಿದ ಶಾಸಕ ದರ್ಶನ್

‌ನಂಜನಗೂಡು: ನಾಳೆ (ಆ.31)  ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ದೇವಸ್ಥಾನದ ದಾಸೋಹ ಭವನದ ಆವರಣದಲ್ಲಿ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ಸ್ಥಳಕ್ಕೆ ಭೇಟಿ ನೀಡಿ ಸಿದ್ದತಾ ಕಾರ್ಯವನ್ನು ವೀಕ್ಷಣೆ ಮಾಡಿದರು.

ಸಿಎಂ ಸಿದ್ದರಾಮಯ್ಯ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ಸಾಕಷ್ಟು ಬಿಗಿ ಭದ್ರತೆ ಒದಗಿಸಲಾಗಿದೆ. ಕಾರ್ಯಕ್ರಮದಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು. ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗಬಾರದು. ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಲು ಸಕಲ ವ್ಯವಸ್ಥೆ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಇದೇ ವೇಳೆ ಶಾಸಕರು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕಳಲೆ ಕೇಶವ ಮೂರ್ತಿ ರವರು, ನಗರ ಬ್ಲಾಕ್ ಅಧ್ಯಕ್ಷರಾದ ಸಿ. ಎಂ ಶಂಕರ್ ರವರು, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕೆ ಮಾರುತಿ ರವರು, ಕರಳಪುರ ನಾಗರಾಜ್ ರವರು, ಚಂದನ್ ರವರು, ಜೈ ರಾಮ್ ರವರು ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.

Call Now Button