ಮೈಸೂರು: ಆ. 31 ರಂದು ನಗರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಗಮಿಸುತ್ತಿರುವ ಹಿನ್ನೆಲೆ ಮತ್ತು ಸಾಮೂಹಿಕ ಗಣಪತಿ ವಿಸರ್ಜನೆ ಸಂಬಂಧ ನಗರ ಪೊಲೀಸರು ಸೂಕ್ತ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
ಈ ಸಂಬಂಧ ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಇಂದು ಉಪ ಪೊಲೀಸ್ ಆಯುಕ್ತರಾದ ಸುಂದರ್ ರಾಜ್ ಅವರ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲಾ ಸಂಚಾರ ಠಾಣೆಯ ಅಧಿಕಾರಿಗಳು & ಸಿಬ್ಬಂದಿಗಳಿಗೆ ಬ್ರಿಫಿಂಗ್ ಸಭೆ ನಡೆಸಲಾಯಿತು. ಈ ವೇಳೆ ಮಾತನಾಡಿದ ಸುಂದರ್ ರಾಜ್ ಅವರು ಎಲ್ಲ ಸಿಬ್ಬಂದಿಗಳು ಸಂಚಾರ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ತಿಳಿಸಿದರು.



