Online News in ಕನ್ನಡ

ಆಧುನಿಕ, ತಾಂತ್ರಿಕ ಶಿಕ್ಷಣವೇ ಸರ್ವಾಂಗೀಣ ಅಭಿವೃದ್ಧಿಗೆ ದಾರಿ; ಪಿ. ವಿಶ್ವನಾಥ್

ಮೈಸೂರು: ಗುರುಕುಲ ಮಾದರಿಯಿಂದ ಆರಂಭವಾದ ಶಿಕ್ಷಣ ಕ್ರಮ ಇಂದು ಹಲವು ಆಯಾಮಗಳನ್ನು ದಾಟಿ, ಆಧುನಿಕ ತಂತ್ರಜ್ಞಾನ ಶಿಕ್ಷಣದ ಮೂಲಕ ಸರ್ವಾಂಗೀಣ ಅಭಿವೃದ್ಧಿಯ ವೇಗವನ್ನು ಹೆಚ್ಚಿಸಿಕೊಂಡಿದೆ ಎಂದು ವಿದ್ಯಾವರ್ಧಕ ಸಂಘದ ಗೌರವ ಕಾರ್ಯದರ್ಶಿ ಪಿ. ವಿಶ್ವನಾಥ್ ಅಭಿಪ್ರಾಯಪಟ್ಟರು.

ವಿದ್ಯಾವರ್ಧಕ ಪದವಿಪೂರ್ವ ಕಾಲೇಜಿನ ವತಿಯಿಂದ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, ಪ್ರಾಥಮಿಕ ಹಂತದಿಂದ ಉನ್ನತ ಶಿಕ್ಷಣದವರೆಗೆ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದು. ಸಮಾಜಕ್ಕೆ ವೈದ್ಯ, ನ್ಯಾಯವಾದಿ, ಇಂಜಿನಿಯರ್ ಹಾಗೂ ಇತರ ವೃತ್ತಿಪರರನ್ನು ರೂಪಿಸುವವರೇ ಶಿಕ್ಷಕರು. ಅವರಿಲ್ಲದಿದ್ದರೆ ಯಾವುದೇ ವೃತ್ತಿ ಸಾಧ್ಯವಿಲ್ಲ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಗೌರವ ಅಧ್ಯಕ್ಷರಾದ ಗುಂಡಪ್ಪಗೌಡ ಅಧ್ಯಕ್ಷತೆ ವಹಿಸಿದ್ದರು. ಕೋಶಾಧಿಕಾರಿ ಶ್ರೀಶೈಲ ರಾಮಣ್ಣ ಬಹುಮಾನ ವಿತರಣೆ ಮಾಡಿದರು. ಕಾಲೇಜಿನ ಪ್ರಾಂಶುಪಾಲ ಪಿ. ಮಹದೇವಸ್ವಾಮಿ, ಉಪನ್ಯಾಸಕರಾದ ಡಿ. ಮಹೇಶ್ ಹಾಗೂ ದಾಕ್ಷಯಿಣಿ ಎಸ್.ಆರ್. ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟು ಶಿಕ್ಷಕರಿಗೆ ಗೌರವ ಸಲ್ಲಿಸಿದರು.

Call Now Button