ಮೈಸೂರು: ದಸರಾ ಆಚರಣೆ ಹಿನ್ನೆಲೆಯಲ್ಲಿ ಸೂಕ್ತ ಬಂದೋಬಸ್ತ್ ಕೈಗೊಳ್ಳುವ ಸಂಬಂಧ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಆರ್. ಹಿತೇಂದ್ರ ಅವರ ನೇತೃತ್ವದಲ್ಲಿ ಸಭೆ ನಡೆಯಿತು.
ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ದಸರಾ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಬಂದೋಬಸ್ತ್ ಕ್ರಮಗಳು, ಸೂಕ್ಷ್ಮ ಪ್ರದೇಶಗಳಲ್ಲಿ ಯಾವ ರೀತಿಯ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು ಎಂಬ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಮೈಸೂರು ನಗರದ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಉಪ ಪೊಲೀಸ್ ಆಯುಕ್ತರಾದ ಬಿಂದುಮಣಿ, ಸುಂದರ್ ರಾಜ್ ಕೆ.ಎಸ್. ನಗರದ ಎಲ್ಲಾ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.


