ಬೆಂಗಳೂರು: ರಾಷ್ಟಕವಿ ಕುವೆಂಪು ಅವರಿಗೆ ಮರಣೋತ್ತರ ಭಾರತ ರತ್ನ ಗೌರವ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿರುವ ರಾಜ್ಯ ಸರ್ಕಾರಕ್ಕೆ ಸಾಹಿತಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ಈ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ವಿಶ್ವಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್ ಮತ್ತು ಹಿರಿಯ ಸಾಹಿತಿಗಳ ನಿಯೋಗವು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಧನ್ಯವಾದ ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ದಿ. ಡಾ. ವಿಷ್ಣುವರ್ಧನ್ ಮತ್ತು ದಿ.ಬಿ. ಸರೋಜಾದೇವಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಗೌರವ ನೀಡಿದ್ದ ರಾಜ್ಯ ಸರ್ಕಾರ ಇದೇ ಸಂದರ್ಭದಲ್ಲಿ ವಿಶ್ವಮಾನವ ಸಂದೇಶ ಸಾರಿದ್ದ ಕವಿ ಕುವೆಂಪು ಅವರಿಗೆ ಮರಣೋತ್ತರ ಭಾರತ ರತ್ನ ಗೌರವ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು.
ಇನ್ನು ನಿಯೋಗದಲ್ಲಿ ಹಿರಿಯ ಸಾಹಿತಿಗಳಾದ ಸಿಪಿಕೆ, ಹಂಪನಾ, ಕೆ.ಎಸ್.ಭಗವಾನ್, ಡಾ. ಯೋಗಣ್ಣ ಸೇರಿ ಹಲವರು ಇದ್ದರು.


