Online News in ಕನ್ನಡ

ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾಗಿ ಹರೀಶ್‌ ಗೌಡ ಆಯ್ಕೆ

ಮೈಸೂರು: ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಹುಣಸೂರು ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಡಿ. ಹರೀಶ್ ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಕೆಲವು ತಿಂಗಳ ಹಿಂದಷ್ಟೇ ಮೈಸೂರು ಜಿಲ್ಲಾ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಆಡಳಿತ ಪಕ್ಷ ಕಾಂಗ್ರೆಸ್‌ ಗೆ ತೀವ್ರ ಪೈಪೋಟಿ ನೀಡಿದ್ದ ಹರೀಶ್‌ ಗೌಡ ಗೆಲುವು ಸಾಧಿಸಿದ್ದರು. ಇದರೊಂದಿಗೆ ತಮ್ಮ ಕೆಲವು ಬೆಂಬಲಿಗರನ್ನು ಗೆಲ್ಲಿಸಿಕೊಂಡಿದ್ದರು. ಕಾಂಗ್ರೆಸ್‌ ಅಭ್ಯರ್ಥಿಗಳು ಎರಡು ಕ್ಷೇತ್ರಗಳಲ್ಲಿ ಕೇವಲ ಒಂದು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು ಎನ್ನುವುದು ವಿಶೇಷ. ಇದೀಗ ಮತ್ತೆ ಸಹಕಾರಿ ಕ್ಷೇತ್ರದಲ್ಲಿ ತಮ್ಮ ಹಿಡಿತ ಸಾಧಿಸುವಲ್ಲಿ ಹರೀಶ್‌ ಗೌಡ ಯಶಸ್ವಿಯಾಗಿದ್ದಾರೆ.

 

Call Now Button