Online News in ಕನ್ನಡ

ಕೊಲೆ, ಹತ್ಯೆ; ಕಮೀಷನರ್‌ ಭೇಟಿಯಾಗಿ ಚರ್ಚೆ ಮಾಡಿದ ಬಿಜೆಪಿ ತಂಡ

ಮೈಸೂರು: ನಗರದಲ್ಲಿ ಕೊಲೆ, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಬಿಜೆಪಿ ನಿಯೋಗ ನಗರ ಪೊಲೀಸ್‌ ಆಯುಕ್ತರ ಕಚೇರಿಗೆ ಭೇಟಿ ನೀಡಿ ಸೂಕ್ತ ಕ್ರಮ ಕೈಗೊಳ್ಳುವ ಕುರಿತು ಚರ್ಚೆ ನಡೆಸಿದೆ.
ಸಂಸದ ಯದುವೀರ್‌ ನೇತೃತ್ವದಲ್ಲಿ ಕಮೀಷನರ್‌ ಸೀಮಾ ಲಾಟ್ಕರ್‌ ಅವರನ್ನು ಭೇಟಿಯಾಗಿ, ಇತ್ತೀಚೆಗೆ ನಗರದಲ್ಲಿ ಹೆಚ್ಚಿನ ಅಪರಾಧ ಕೃತ್ಯಗಳು ನಡೆಯುತ್ತಿವೆ. ಇವುಗಳ ನಿಯಂತ್ರಣಕ್ಕೆ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಈಗ ಏನೇನು ಬೆಳವಣಿಗೆ ಆಗಿದೆ ಎಂಬುದರ ಬಗ್ಗೆ ಮಾಹಿತಿ ಪಡೆದುಕೊಂಡರು. ಜೊತೆಗೆ ಮುಂದಿನ ದಿನಗಳಲ್ಲಿ ಈ ರೀತಿಯ ಪ್ರಕರಣಗಳು ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಸೂಚನೆ ನೀಡಿದರು.
ಈ ವೇಳೆ ಶಾಸಕ ಶ್ರೀವತ್ಸ, ಮಾಜಿ ಶಾಸಕ, ಬಿಜೆಪಿ ನಗರಾಧ್ಯಕ್ಷ ಎಲ್.‌ ನಾಗೇಂದ್ರ, ಡಿಸಿಪಿಗಳಾದ ಸುಂದರ್‌ ರಾಜ್‌, ಬಿಂದು ಸೇರಿ ಬಿಜೆಪಿ ಮುಖಂಡರು ಹಾಜರಿದ್ದರು.
Call Now Button