Online News in ಕನ್ನಡ

ಹುಲಿ ದಾಳಿಗೆ ಮತ್ತೊಬ್ಬ ರೈತ ಬಲಿ; ಹೆಚ್ಚಿದ ಜನಾಕ್ರೋಶ

ಮೈಸೂರು: ಸರಗೂರು ತಾಲೂಕಿನ ಕುರ್ಣೇಗಾಲ ಕೂಡಗಿ ಗ್ರಾಮದಲ್ಲಿ ಹುಲಿ ದಾಳಿಯಿಂದ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಗ್ರಾಮದ ನಿಂಗಯ್ಯ (65) ಹುಲಿ ದಾಳಿಯಿಂದ ಮೃತಪಟ್ಟ ವ್ಯಕ್ತಿ. ಕುರ್ಣೇಗಾಲದ ಗ್ರಾಮದ ಕಾಡಂಚಿನ ಜಮೀನೊಂದರಲ್ಲಿ ಹಸು ಮೇಯಿಸುತ್ತಿದ್ದ ವೇಳೆ ದಾಳಿ ಮಾಡಿರುವ ಹುಲಿ ವ್ಯಕ್ತಿ ಕುತ್ತಿಗೆ ಭಾಗವನ್ನು ಕಚ್ಚಿ ಕೊಂದಿದೆ. ಇದರಿಂದ ಗ್ರಾಮಸ್ಥರು ಹೆದರಿದ್ದು, ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಹಿಂದೆ ಇಬ್ಬರು ವ್ಯಕ್ತಿಗಳು ಹುಲಿ ದಾಳಿಗೆ ತುತ್ತಾಗಿದ್ದರು. ಒಬ್ಬರು ಮೃತಪಟ್ಟಿದ್ದರು. ಇದರ ವಿರುದ್ಧ ಜಿಲ್ಲೆಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ಈಗ ಹುಲಿ ಕೂಬಿಂಗ್‌ ಕಾರ್ಯಾಚರಣೆಗೆ ಅರಣ್ಯ ಇಲಾಖೆ ಮುಂದಾಗಿದೆ.

Call Now Button