Online News in ಕನ್ನಡ

ವಾಣಿಜ್ಯ ಕಟ್ಟಡ ಉದ್ಘಾಟನೆ ಮಾಡಿದ ಶಾಸಕ ಸ್ವರೂಪ್‌ ಪ್ರಕಾಶ್‌

ಹಾಸನ: ಇಲ್ಲಿನ ಬೈಲಹಳ್ಳಿ ಪಂಚಾಯಿತಿ ವ್ಯಾಪ್ತಿಯ ವರ್ತಿಕೆರೆ ಗ್ರಾಮದಲ್ಲಿ 22.60 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣವಾಗಿರುವ ವಾಣಿಜ್ಯ ಕಟ್ಟಡವನ್ನು ಶಾಸಕ ಸ್ವರೂಪ್‌ ಪ್ರಕಾಶ್‌ ಉದ್ಘಾಟನೆ ಮಾಡಿದರು. ನಂತರ ಇಲ್ಲಿನ ರಾಮದೇವರ ಗುಡಿಗೆ ಭೇಟಿ ನೀಡಿ ವಿಶೇಷ ಪೂಜೆ ನೆರವೇರಿಸಿ ಆಶೀರ್ವಾದ ಪಡೆದರು. ಈ ವೇಳೆ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಗಾಗಿ ನಾನು ನಿರಂತರವಾಗಿ ಶ್ರಮಿಸುತ್ತಿದ್ದೇನೆ. ನಿಮ್ಮ ಸಮಸ್ಯೆಗಳನ್ನು ಹಂತ ಹಂತವಾಗಿ ನೆರವೇರಿಸುವ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು, ಯುವಕರು, ಹಿರಿಯರು, ಗ್ರಾಮಸ್ಥರು, ಸಾರ್ವಜನಿಕರು, ಅಧಿಕಾರಿಗಳು ಉಪಸ್ಥಿತರಿದ್ದರು.

Call Now Button