Online News in ಕನ್ನಡ

ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು : ಪ್ರೊ. ಕೆ.ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ

ಮೈಸೂರು: ಯಕ್ಷಗಾನ ಕಲಾವಿದರಲ್ಲಿ ಬಹುತೇಕರು ಸಲಿಂಗಿಗಳು. ಅಲ್ಲಿ ಅಂಥ ಅನಿವಾರ್ಯತೆ ಇದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಕೆ.ಪುರುಷೋತ್ತಮ ಬಿಳಿಮಲೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ನಗರದ ಮಾನಸಗಂಗೋತ್ರಿ ಪ್ರಸಾರಾಂಗದಲ್ಲಿ ನಡೆದ ಧರೆಗೆ ದೊಡ್ಡವರ ಏಳು ಪಠ್ಯಗಳು ಹಾಗೂ ನಾನು ಕೂಗುವ ಕೂಗು ಕೃತಿಗಳನ್ನು ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸತ್ಯವನ್ನು ಹೇಳಲು ಹಿಂಜರಿಯಬಾರದು ಎಂದರು.
ಕಲಾವಿದರು ಮೇಳಕ್ಕೆಂದು ಆರೆಂಟು ತಿಂಗಳು ತಿರುಗಾಟದಲ್ಲೇ ಇದ್ದರಿಂದ, ಅವರಿಗೆ ಯಾರೂ ಹೆಣ್ಣು ಕೊಡುತ್ತಿರಲಿಲ್ಲ. ಅಲ್ಲಿನ ಸ್ತ್ರೀ ವೇಷಧಾರಿಗಳೂ ಒತ್ತಡದಲ್ಲಿರುತ್ತಿದ್ದರು. ಅವರ ಮೇಲೆ ಇತರರಿಗೆ ಮೋಹವೇ ಇರುತ್ತಿತ್ತು. ಸ್ತ್ರೀ ವೇಷದ ಕಲಾವಿದ ಏನಾದರೂ ಸಲಿಂಗಕಾಮ ನಿರಾಕರಿಸಿದ್ದರೆ ಭಾಗವತರು ಮರು ದಿವಸ ಅವರಿಗೆ ಪದ್ಯವನ್ನೇ ಕೊಡುತ್ತಿರಲಿಲ್ಲ. ರಂಗಭೂಮಿಯ ಮೇಲೆ ಅವರ ವಿರುದ್ಧ ಸೇಡು ತೀರಿಸಿಕೊಳ್ಳಲಗುತ್ತಿತ್ತು ಎಂದಿದ್ದಾರೆ.
ಮೇಳದಲ್ಲಿ ಅವಕಾಶ ಇಲ್ಲದೆ ಹೋದರೆ ಬದುಕೇ ಇಲ್ಲವೆಂಬ ಒತ್ತಡದಲ್ಲಿ ಕಲಾವಿದರು ಇರುತ್ತಿದ್ದರು. ಆಗೆಲ್ಲ ಕಲಾವಿದ ಮೇಳಕ್ಕೆ ಂದು ಹೋಗಿ ವಾಪಸಾದಾಗ ಹಲವರಿಗೆ ಮನೆಯೇ ಇರುತ್ತಿರಲಿಲ್ಲ ಎಂದು ಬಣ್ಣಿಸಿದ್ದಾರೆ.

Call Now Button