Online News in ಕನ್ನಡ

ಹೈಕಮಾಂಡ್ ಹೇಳಿದಂತೆ ನಾನು ಕೇಳುತ್ತೇನೆ ಚಿಕ್ಕಬಳ್ಳಾಪುರದಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಚಿಕ್ಕಬಳ್ಳಾಪುರ: ಹೈಕಮಾಂಡ್ ಹೇಳಿದಂತೆ ಎಲ್ಲರೂ ಕೇಳಬೇಕು. ಹೈಕಮಾಂಡ್ ನನ್ನನ್ನು ಮುಂದುವರೆಯಿರಿ ಎಂದರೆ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮಲ್ಲಿ ಹೈಕಮಾಂಡ್ ಅಂತ ಇದೆ. ಯಾವುದೇ ವಿಷಯವನ್ನು ಹೈಕಮಾಂಡ್ ತೀರ್ಮಾನ ಮಾಡುತ್ತೆ. ಹೈಕಮಾಂಡ್ ಮಾತನ್ನು ಎಲ್ಲ ನಾಯಕರು ಕೇಳಬೇಕು, ನಾನೂ ಕೇಳಬೇಕು ಮತ್ತು ಡಿ.ಕೆ.ಶಿವಕುಮಾರ್ ಸಹ ಕೇಳಬೇಕು ಎಂದಿದ್ದಾರೆ.
ಐದು ತಿಂಗಳ ಹಿಂದೆ ನಾನೇ ದೆಹಲಿಗೆ ಹೋಗಿದ್ದ ಸಚಿವ ಸಂಪುಟ ಪುನರ್ ರಚನೆ ಬಗ್ಗೆ ವರಿಷ್ಠರಿಗೆ ಕೇಳಿದ್ದೆ. ಅವರು ಎರಡೂವರೆ ವರ್ಷ ಕಳೆದಯಲಿ ಎಂದು ಹೇಳಿದ್ದರು. ಅದರಂತೆ ನಾನು ನಡೆದುಕೊಂಡೆ. ಈಗಲೂ ಸಹ ಹೈಕಮಾಂಡ್ ಹೇಳಿದಂತೆ ನಡೆಯಬೇಕು. ಅವರು ನನ್ನನ್ನು ಮುಂದುವರೆಯಿರಿ ಎಂದು ಹೇಳಿದರೆ ಮುಂದುವರೆಯುತ್ತೇನೆ ಎಂದು ನುಡಿದರು.

ಬಿಜೆಪಿ ಅಪಪ್ರಚಾರ
ಚಿಕ್ಕಬಳ್ಳಾಪುರ ಜಿಲ್ಲೆ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಭಿವೃದ್ಧಿ ಕೆಲಸಗಳಿಗೆ ವೆಚ್ಚ ಮಾಡಲಾಗುತ್ತಿದೆ. ಚಿಕ್ಕಬಳ್ಳಾಪುರದಲ್ಲಿ ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡುತ್ತಿದ್ದೇವೆ . ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ಸುಳ್ಳು ಬಿಟ್ಟರೆ ಬೇರೇನೂ ಹೇಳಲು ಬರುವುದಿಲ್ಲ. ಸುಳ್ಳೇ ಅವರ ಮನೆ ದೇವರು ಎಂದರು.

ನುಡಿದಂತೆ ನಡೆಸಿದ್ದೇವೆ
ಗ್ಯಾರಂಟಿ ಯೋಜನೆಗಳಿಗೆ ಒಂದು ಲಕ್ಷ ಕೋಟಿ ರೂಗಳಿಗೂ ಹೆಚ್ಚು ಹಣವನ್ನು ವೆಚ್ಚ ಮಾಡಲಾಗಿದೆ. ನಾವು ನುಡಿದಂತೆ ನಡೆದ ಸರ್ಕಾರ ಎಂದು ಹೇಳಿದ್ದೆವು. ಅದರಂತೆ ನಡೆದಿದ್ದೇವೆ ಎಂದರು.

ಪಕ್ಷದ ವರಿಷ್ಠರ ತೀರ್ಮಾನಕ್ಕೆ ನಾನು ಡಿ.ಕೆ.ಶಿವಕುಮಾರ್ ಬದ್ಧರಾಗಬೇಕು
ಅಧಿಕಾರ ಹಂಚಿಕೆಗೆ ಸಂಬಂಧಿಸಿದಂತೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ನಮ್ಮಲ್ಲಿ ಹೈ ಕಮಾಂಡ್ ಏನು ತೀರ್ಮಾನ ಮಾಡ್ತಾರೋ ಅದರಂತೆ ನಾನು ಹಾಗೂ ಡಿ. ಕೆ.ಶಿವಕುಮಾರ್ ಒಪ್ಪಬೇಕು ಎಂದರು.

ಪಕ್ಷದ ವರಿಷ್ಠರ ತೀರ್ಮಾನದಂತೆ ನಡೆಯುವೆವು
ಹೈ ಕಮಾಂಡ್ ಐದು ತಿಂಗಳ ಹಿಂದೆ ಭೇಟಿಯಾದಾಗ. ಸಚಿವ ಸಂಪುಟ ಪುನರ್ ರಚನೆ ಮಾಡಲು ಸೂಚನೆ ನೀಡಿದ್ದರು. ನಾನು ಎರಡೂವರೆ ವರ್ಷ ತುಂಬಿದ ನಂತರ ಮಾಡೋಣ ಎಂದು ತಿಳಿಸಿದ್ದೆ. ಈಗ ಏನು ಸೂಚನೆ ನೀಡುತ್ತಾರೋ ಅದರಂತೆ ನಡೆಯುತ್ತೇವೆ ಎಂದರು.

Call Now Button