Online News in ಕನ್ನಡ

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ: ಗ್ರಾಮಸ್ಥರು ಮಾಡಿದ ಕೆಲಸ ಏನು ಗೊತ್ತೆ ?

ಮೈಸೂರು: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವ್ಯಕ್ತಿಯನ್ನು ಗ್ರಾಮಸ್ಥರು ಹಿಗ್ಗಾಮಗ್ಗ ತಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಹೋಬಳಿಯ ಹೊಸರಾಮನಹಳ್ಳಿ ಗ್ರಾಮದಲ್ಲಿ ಜರುಗಿದೆ.
ಹೊಸ ರಾಮೇನಹಳ್ಳಿಯ ನಿವಾಸಿ ಲೋಕೇಶ್‌ (೪೬) ಬಂಧಿತ ಆರೋಪಿ. ಆರೋಪಿಯು ಡಿಸೆಂಬರ್‌ ೩ರಂದು ೯ ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಬಾಲಕಿಯ ಪೋಷಕರು ಬಿಳಿಕೆರೆ ಪೊಲೀಸ್‌ ಠಾಣೆಗೆ ದೂರು ದಾಖಲಿಸಿದ್ದರು.
ಈ ಸಂಬಂಧ ಊರಿನ ಹಿರಿಯರು ಪಂಚಾಯ್ತಿ ನಡೆಸಿದಾಗಲೂ ಆರೋಪಿಯು ಉದ್ಧಟತನದಿಂದ ವರ್ತಿಸಿದ್ದಾನೆ ಎಂದು ಗ್ರಾಮಸ್ಥರು ದೂರಿದ್ದಾರೆ. ನಂತರ ತನ್ನನ್ನೇನೂ ಮಾಡಲಾದು ನಾವೇ ಪೊಲೀಸರಿಗೆ ಶರಣಾಗುತ್ತೇನೆ ಎಂದು ಹೇಳಿ ಠಾಣ ಕಡೆಗೆ ಹೊರಾಟ ರೊಚ್ಚಿಗೆದ್ದ ಗ್ರಾಮಸ್ಥರು ಈತನ್ನು ಹಿಡಿದು ಹಿಗ್ಗಾಮಗ್ಗ ತಳಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಆರೋಪಯನ್ನು ವಶಕ್ಕೆ ಪಡೆದು ಹಲ್ಲೆಗೆ ಒಳಗಾಗಿದ್ದರಿಂದ ಚಿಕಿತ್ಸೆ ಕೊಡಿಸಿ ನಂತರ ಪ್ರಕರಣ ದಾಖಲಿಸಿದ್ದಾರೆ. ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದರೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಯುವತಿಯನ್ನು ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

Call Now Button