Online News in ಕನ್ನಡ

ಆರ್ ಸಿ ಬಿ ಅಭಿಮಾನಿಗಳಿಗೆ ಶುಭ ಸುದ್ದಿ: ಈ ಬಾರಿ ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ

ಮೈಸೂರು: ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗುವುದು ಎಂದು ಭಾರತದ ಮಾಜಿ ಕ್ರಿಕೆಟ್ ಆಟಗಾರ, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‍ನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮಂಗಳವಾರ ಈ ವಿಷಯ ತಿಳಿಸಿದ ಅವರು, ವಿಜಯ್ ಹಜಾರೆ ಕ್ರಿಕೆಟ್ ಪಂದ್ಯಕ್ಕೆ ಬೆಂಗಳೂರಿಗೆ ವೀರಾಟ್ ಕೊಹ್ಲಿ ಆಗಮಿಸಲಿದ್ದಾರೆ ಎಂದೂ ಸಹ ಹೇಳಿದ್ದಾರೆ.


ಈ ಸಾಲಿನ ಐಪಿಎಲ್ ಪಂದ್ಯಾವಳಿಯ ಉದ್ಘಾಟನಾ ಪಂದ್ಯಾವಳಿಯನ್ನು ಬೆಂಗಳೂರಿನಲ್ಲಿ ನಡೆಸುವ ಬಗ್ಗೆ ಈಗಾಗಲೇ ಬಿಸಿಸಿಐ ಜತೆ ಮಾತುಕತೆ ನಡೆಸಲಾಗಿದೆ. ಪ್ರತಿ ವರ್ಷ ಐಪಿಎಲ್ ಟ್ರೋಫಿ ಗೆದ್ದ ಹೋಂ ಗ್ರೌಂಡ್‍ನ್ಲೇ ಉದ್ಘಾಟನಾ ಪಂದ್ಯ ನಡೆಯುತ್ತಿತ್ತು. ಆದರೆ, ಆರ್‍ಸಿಬಿ ಸಂಭ್ರಮಾಚರಣೆಯ ವೇಳೆ ಸಂಭವಿಸಿದ ದುರ್ಘಟನೆಯಿಂದ ಸಾಕಷ್ಟು ಗೊಂದಲಗಳಾಗಿತ್ತು. ಹೀಗಾಗಿ ನಮ್ಮ ತಂಡ ಚುನಾವಣೆ ಗೆದ್ದ ಬಳಿಕ ಈಗಾಗಲೇ ರಾಜ್ಯ ಸರಕಾರದ ಜೊತೆ ಮಾತುಕತೆ ನಡೆಸಿದ್ದೇವೆ. ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳು ಉದ್ಘಾಟನಾ ಪಂದ್ಯಾವಳಿ ನಡೆಸಲು ಹಸಿರು ನಿಶಾನೆ ತೋರಿದ್ದಾರೆ. ಗೃಹ ಸಚಿವರ ಜತೆಗೂ ದೂರವಾಣಿ ಮೂಲಕ ಮಾತನಾಡಿದ್ದೇನೆ. ಶೀಘ್ರದಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯದ ದಿನಾಂಕ ನಿಗದಿಯಾಗಲಿದೆ ಎಂದರು.
ಈನಡುವೆ,
ಮುಂಬರುವ ವಿಜಯ್ ಹಜಾರೆ ಪಂದ್ಯಕ್ಕೆ ಬೆಂಗಳೂರಿಗೆ ಭಾರತದ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ಆಗಮಿಸಲಿದ್ದಾರೆ. ಡೆಲ್ಲಿ ತಂಡದಿಂದ ಈ ಬಾರಿ ವಿರಾಟ್ ಆಡಲಿದ್ದಾರೆ. ಮೈಸೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣದ ಬಗ್ಗೆ ಎಲ್ಲ ಮಾತುಕತೆ ನಡೆದಿದೆ. ಕಳೆದ ಮೂರು ವರ್ಷಗಳಿಂದ ಕ್ಲಬ್‍ನಲ್ಲಿ ಸಾಕಷ್ಟು ಗೊಂದಲವಿತ್ತು. ಈಗ ಎಲ್ಲ ಬಗೆ ಹರಿದಿದೆ ಎಂದು ವೆಂಕಟೇಶ್ ಪ್ರಸಾದ್ ತಿಳಿಸಿದರು.

Call Now Button