ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಮಾರ್ಕ್ ಸಿನಿಮಾ ಇದೇ ತಿಂಗಳ 25ರಂದು ತೆರೆಗೆ ಬರ್ತಿದೆ. ಪ್ರಚಾರ ಕಾರ್ಯ ಕೂಡ ಭರದಿಂದ ಸಾಗಿದೆ. ಇದರ ಭಾಗವಾಗಿ ಮಾರ್ಕ್ ಸಿನಿಮಾದ ಸ್ಪೆಷಲ್ ನಂಬರ್ ಬಿಡುಗಡೆ ಮಾಡಲಾಗಿದೆ. ಮಾರ್ಕ್ ಸಿನಿಮಾದ ಮಸ್ತ್ ಮಲೈಕಾ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲಿ ಕಿಚ್ಚ ಸುದೀಪ್ ಹಾಗೂ ನಿಶ್ವಿಕಾ ನಾಯ್ಡು ಮಸ್ತ್ ಆಗಿ ಕುಣಿದಿದ್ದಾರೆ. ಮಲೈಕಾ ಆಗಿ ನಿಶ್ಚಿಕಾ ಕಾಣಿಸಿಕೊಂಡಿದ್ದಾರೆ.
ಅನೂಪ್ ಭಂಡಾರಿ ಮಸ್ತ್ ಮಲೈಕಾ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಸುದೀಪ್ ಮಗಳು ಸಾನ್ವಿ ಸುದೀಪ್ ಹಾಗೂ ನಕಾಶ್ ಅಜೀಜ್ ಇದನ್ನ ಹಾಡಿದ್ದಾರೆ. ಅಜನೀಶ್ ಲೋಕನಾಥ್ ಈ ಚಿತ್ರಕ್ಕೆ ಸಂಗೀತ ಕೊಟ್ಟಿದ್ದಾರೆ.
ಮಾರ್ಕ್ ಚಿತ್ರವನ್ನ ವಿಜಯ್ ಕಾರ್ತಿಕೇಯ ಡೈರೆಕ್ಷನ್ ಮಾಡಿದ್ದಾರೆ. ಮ್ಯಾಕ್ಸ್ ಚಿತ್ರ ಆದ್ಮೇಲೆ ಈ ಒಂದು ಚಿತ್ರವನ್ನ ಸುದೀಪ್ ಜೊತೆಗೆ ಮಾಡಿದ್ದಾರೆ. ಚಿತ್ರದಲ್ಲಿ ದೀಪ್ಷಿಕಾ, ನವೀನ್ ಚಂದ್ರ, ಗುರು ಸೋಮಸುಂರಂ, ರೋಶಿನಿ ಪ್ರಕಾಶ್, ಗೋಪಾಲ್ಕೃಷ್ಣ ದೇಶಪಾಂಡೆ, ಮಹಾಂತೇಶ್ ಹಿರೇಮಠ್, ಡ್ರ್ಯಾಗನ್ ಮಂಜು, ಆರ್ಚನಾ ಕೊಟ್ಟಿಗೆ, ಯೋಗಿ ಬಾಬು, ಶೈನ್ ಟಾಮ್ ಚಾಕೋ ಅಭಿನಯಿಸಿದ್ದಾರೆ. ಸತ್ಯ ಜ್ಯೋತಿ ಫಿಲ್ಮ್ ಹಾಗೂ ಕಿಚ್ಚ ಕ್ರಿಯೇಷನ್ ಬ್ಯಾನರ್ ನಡಿ ಸಿನಿಮಾ ತಯಾರಾಗಿದೆ.

ಕಿಚ್ಚನ ಮಾರ್ಕ್ ಸಿನಿಮಾದ ಪ್ರಚಾರ ಕಾರ್ಯ ಜೋರಾಗಿ ಸಾಗ್ತಿದೆ. ಟ್ರೇಲರ್, ಹಾಡುಗಳ ಮೂಲಕ ಪ್ರೇಕ್ಷಕರಿಗೆ ಆಮಂತ್ರಣ ಕೊಟ್ಟಿರುವ ಚಿತ್ರತಂಡ ,ನಿಮ್ಮನ್ನು ಭೇಟಿಯಾಗೋದಿಕ್ಕೆ ಗಂಡು ಮೆಟ್ಟಿದನಾಡು ಹುಬ್ಬಳ್ಳಿಗೆ ಬರ್ತಿದೆ. ಹುಬ್ಬಳ್ಳಿಯಲ್ಲಿ ಮಾರ್ಕ್ ಚಿತ್ರದ ಪ್ರೀ ರಿಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದೇ ತಿಂಗಳ 20 ರಂದು ಕಾರ್ಯಕ್ರಮ ನಡೆಯುತ್ತದೆ. ಕಿಚ್ಚ ಸುದೀಪ್, ಸೇರಿದಂತೆ ಸಿನಿಮಾ ಬಹುತೇಕ ಕಲಾವಿದರು ಹುಬ್ಬಳ್ಳಿಗೆ ಬರ್ತಿದ್ದಾರೆ. ನೆಹರು ಮೈದಾನದಲ್ಲಿ ಮಾರ್ಕ್ ಪ್ರೀ ರಿಲೀಸ್ ಕಾರ್ಯಕ್ರಮ ನಡೆಯಲಿದೆ.
ಮಾರ್ಕ್ ಚಿತ್ರ ಇದೇ ತಿಂಗಳ 25ರಂದು ದೊಡ್ಟಮಟ್ಟದಲ್ಲಿ ಬಿಡುಗಡೆಯಾಗಲಿದೆ. ಈ ಸಿನಿಮಾವನ್ನು ವಿಜಯ್ ಕಾರ್ತಿಕೇಯ ಡೈರೆಕ್ಷನ್ ಮಾಡಿದ್ದಾರೆ. ‘ಮ್ಯಾಕ್ಸ್’ ಚಿತ್ರ ಆದ್ಮೇಲೆ ‘ಮಾರ್ಕ್’ ಚಿತ್ರಕ್ಕಾಗಿ ಕಿಚ್ಚ ಸುದೀಪ್ ಜೊತೆಗೆ ಮತ್ತೊಮ್ಮೆ ವಿಜಯ್ ಕಾರ್ತಿಕೇಯ ಕೈ ಜೋಡಿಸಿದ್ದಾರೆ. ‘ಸತ್ಯ ಜ್ಯೋತಿ ಫಿಲ್ಮ್ಸ್’ ಮತ್ತು ‘ಕಿಚ್ಚ ಕ್ರಿಯೇಷನ್’ ಮೂಲಕ ‘ಮಾರ್ಕ್’ ಸಿನಿಮಾ ನಿರ್ಮಾಣವಾಗಿದೆ. ಸುದೀಪ್ ಜೊತೆ ದೀಪ್ಷಿಕಾ, ನವೀನ್ ಚಂದ್ರ, ರೋಶಿನಿ ಪ್ರಕಾಶ್, ಗುರು ಸೋಮಸುಂದರಂ, ಗೋಪಾಲಕೃಷ್ಣ ದೇಶಪಾಂಡೆ, ಡ್ರ್ಯಾಗನ್ ಮಂಜು, ಅರ್ಚನಾ ಕೊಟ್ಟಿಗೆ, ಮಹಾಂತೇಶ್ ಹಿರೇಮಠ್, ಶೈನ್ ಟಾಮ್ ಚಾಕೋ, ಯೋಗಿ ಬಾಬು ಮುಂತಾದವರು ‘ಮಾರ್ಕ್’ ಚಿತ್ರದಲ್ಲಿ ನಟಿಸಿದ್ದಾರೆ.


