ಚಾಮರಾಜನಗರ : ಕೆಎಸ್ಆರ್ಟಿಸಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬಸ್ನ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದು 15ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ಬೆಂಡರವಾಡಿ ಬಳಿ ನಿನ್ನೆ ರಾತ್ರಿ ಸಂಭವಿಸಿದೆ. ತಾಲೂಕಿನ ಇರಸವಾಡಿ ಗ್ರಾಮದ ನಿವಾಸಿ, ಬಸ್ನ ಚಾಲಕ ಮಂಜು ಮೃತ ದುರ್ದೈವಿ. ಲಾರಿಯ ಚಾಲಕ ತಮಿಳುನಾಡಿನ ಗೋವಿಂದಸ್ವಾಮಿ ಎಂಬುವ ವರ ಎರಡು ಕಾಲಿಗೆ ಪೆಟ್ಟಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ವಿವರ : ಮೈಸೂರಿನಿಂದ ಚಾ.ನಗರಕ್ಕೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಹಾಗೂ ಚಾ.ನಗರದಿಂದ ನಂಜನಗೂಡಿಗೆ ಹೋಗುತ್ತಿದ್ದ ಲಾರಿ ನಡುವೆ ಬೆಂಡರವಾಡಿ ಬಳಿ ಮುಖಾಮುಖಿ ಡಿಕ್ಕಿಯಾಗಿದ್ದು ಅಪಘಾತದ ತೀವ್ರತೆಗೆ ಬಸ್ ಹಾಗೂ ಲಾರಿಯ ಮುಂಭಾಗ ಸಂಪೂರ್ಣವಾಗಿ ಜಖಂಗೊ ಂಡಿದೆ. ಅಪಘಾತದಲ್ಲಿ ಬಸ್ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂ ಡಿದ್ದು ಇವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.
ವಿಷಯ ತಿಳಿದು ಸ್ಥಳಕ್ಕೆ ಚಾಮರಾಜನಗರ ಸಂಚಾರ ಠಾಣೆಯ ಪೊಲೀಸರು ತೆರಳಿ ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಸಿಮ್ಸ್ ಆಸ್ಪತ್ರೆಗೆ ಸಾಗಿಸಿದರು. ತೀವ್ರವಾಗಿ ಗಾಯಗೊಂ ಡಿರುವವರನ್ನು ಮೈಸೂರಿನ ಆಸ್ಪತ್ರೆಗೂ ಕಳುಹಿಸಿಕೊಡಲಾಗಿದೆ.ಅಪಘಾತ ಹಿನ್ನೆಲೆಯಲ್ಲಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಬಳಿಕ ಪೊಲೀಸರು ಬಸ್ ಹಾಗೂ ಲಾರಿಯನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂಬಂಧ ಚಾಮರಾಜನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಡಿಸಿ, ಎಸ್ಪಿ ಭೇಟಿ : ಅಪಘಾತ ಸ್ಥಳಕ್ಕೆ ಇಂದು ಬೆಳಗ್ಗೆ ಜಿಲ್ಲಾಧಿಕಾರಿ ಶ್ರೀರೂಪ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಮುತ್ತುರಾಜ್ ಅವರು ಭೇಟಿ ನೀಡಿ ಪರಿಶೀಲಿಸಿದರು. ಸ್ಥಳೀಯರು ಹಾಗೂ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಸಂಚಾರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಹನುಮಂತ ಉಪ್ಪಾರ್ ಸೇರಿದಂತೆ ಇತರರಿದ್ದರು.


