ಮೈಸೂರು: ʻ ಉಪ್ಪು ತಿಂದವರು ನೀರು ಕುಡಿಯಲೇ ಬೇಕು. ನಾವು ಯಾರ ರಕ್ಷಣೆಯನ್ನೂ ಮಾಡುವುದಿಲ್ಲ. ಆಡಿಯೋದಲ್ಲಿ ಸಚಿವರ ಹೆಸರು ಬಂದಿರುವ ಬಗ್ಗೆ ನನಗೆ ಗೊತ್ತಿಲ್ಲʼ. ಅಬಕಾರಿ ಡಿಸಿ ಮೇಲೆ ಲೋಕಾಯುಕ್ತ ದಾಳಿ ಸಂಬಂಧ ಮಾಧ್ಯಮಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೀಗೆ ಪ್ರತಿಕ್ರಿಯಿಸಿದ್ದಾರೆ.
ಬಿಜೆಪಿ ಅವಧಿಯಲ್ಲಿ 40 % ಭ್ರಷ್ಟಾಚಾರ ನಡಡೆಯುತ್ತದೆ ಎಂದು ನಾನು ಹೇಳಿರಲಿಲ್ಲ. ಅದನ್ನು ಗುತ್ತಿಗೆದಾರರು ಹೇಳಿದ್ದರು. ಅಂತವರೇನು ನಮ್ಮ ಮೇಲೆ ಆರೋಪ ಮಾಡುವುದು. ಬಳ್ಳಾರಿ ಗಲಾಟೆ ಪ್ರಕರಣವನ್ನು ಸಿಬಿಐಗೆ ವಹಿಸಿ ಎಂದು ಕೇಳಲು ಬಿಜೆಪಿಗೆ ನೈತಿಕತೆ ಇಲ್ಲ. ನಾನು ಏಳೆಂಟು ಕೇಸ್‌ಗಳನ್ನು ಸಿಬಿಐಗೆ ಕೊಟ್ಟಿದ್ದೇನೆ. ಬಿಜೆಪಿ ಅವರು ಅಧಿಕಾರದಲ್ಲಿದ್ದಾಗ ಒಂದೇ ಒಂದು ಕೇಸ್ ಸಿಬಿಐಗೆ ಕೊಟ್ಟಿದ್ದಾರಾ ? ಕೇಳಿ ಎಂದರು.
ಜನಾರ್ಧನ್ ರೆಡ್ಡಿಯದ್ದು ಗೂಂಡಾ ಸಂಸ್ಕೃತಿ, ಅವರಿಗೆ ಯಾವ ಸಂಸ್ಕಾರಗಳು ಇಲ್ಲ. ನಾನು ವಿರೋಧ ಪಕ್ಷದ ನಾಯಕನಾಗಿದ್ದಾಗ ನಾನು ಇಬ್ರಾಹಿಂ ಚುನಾವಣಾ ಪ್ರಚಾರಕ್ಕೆ ಹೋಗಿದ್ದಾಗ ನಮಗೆ ಪ್ರಚಾರಕ್ಕೆ ಜಾಗ ಕೊಡಲಿಲ್ಲ. ಕೊನೆಗೆ ನಾವು ಕುರುಬರ ದೇವಸ್ಥಾನದಲ್ಲಿ ನಿಂತು ಪ್ರಚಾರ ಮಾಡಿ ಬಂದಿದೆ. ಇಂತಹ ರೆಡ್ಡಿ ನಮಗೇನು ಪಾಠ ಮಾಡುತ್ತಾರೆ ಎಂದು ತಿರುಗೇಟು ನೀಡಿದರು.


