Online News in ಕನ್ನಡ

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ನಬಿನ್‌ ಅವಿರೋಧ ಆಯ್ಕೆ

ನವದೆಹಲಿ: ಭಾರತೀಯ ಜನತಾ ಪಕ್ಷದ ರಾಷ್ಟ್ರದ ಅಧಿಕೃತ ಸಾರಥಿಯಾಗಿ ನಿತಿನ್‌ ನಬಿನ್‌ ಆಯ್ಕೆಯಾಗಿದ್ದಾರೆ. ಈ ವಿಷಯವನ್ನು ಬಿಜೆಪಿಯ ಹಿರಿಯ ನಾಯಕ ಮತ್ತು ಚುನಾವಣಾಧಿಕಾರಿ ಕೆ.ಲಕ್ಷ್ಮಣ್‌ ಅವರು ಪ್ರಕಟಿಸಿದರು. ನಿತಿನ್‌ ನಬಿನ್‌ ಅವರು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ಬಗ್ಗೆ ಅಧಿಕೃತ ಘೋಷಣೆ ಮಾಡಿದರು.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಬಿನ್ ಅವರ ಉಮೇದುವಾರಿಕೆಯನ್ನು ಸೂಚಿಸಿದವರಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಒಬ್ಬರಾಗಿದ್ದಾರೆ. ಪಕ್ಷದ ಮುಖ್ಯಸ್ಥ ಜೆ.ಪಿ. ನಡ್ಡಾ, ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ನಿತಿನ್ ಗಡ್ಕರಿ ಸೇರಿದಂತೆ ಹಲವಾರು ಹಿರಿಯ ಬಿಜೆಪಿ ನಾಯಕರು ನಬಿನ್ ಉಮೇದುವಾರಿಕೆಯನ್ನು ಅನುಮೋದಿಸಿದ್ದರು.
ಬಿಹಾರ ಮೂಲದವರಾದ ನಬಿನ್‌ ಅವರು ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಪಕ್ಷದ ರಾಷ್ಟ್ರೀಯ ಅ‍ಧ್ಯಕ್ಷ ಹುದ್ದೆಗೆ ಆಯ್ಕೆಯಾದ ಅತ್ಯಂತ ಕಿರಿಯ ನಾಯಕರಾಗಿದ್ದು, ಈಗ ಇವರಿಗೆ ೪೫ ವರ್ಷ. ಪಶ್ಚಿಮ ಬಂಗಾಳ ಸೇರಿದಂತೆ ಪ್ರಮುಖ ರಾಜ್ಯಗಳ ವಿಧಾನಸಭಾ ಚುನಾವಣಾ ಹೊಸ್ತಿನಲ್ಲಿ ಹೊಸ ಅಧ್ಯಕ್ಷರ ಆಯ್ಕೆಯಾಗಿದೆ.

Call Now Button