Online News in ಕನ್ನಡ

ಶಿಕ್ಷಕರು ವಿದ್ಯಾರ್ಥಿಗಳಿಗೆ ಪರಿಣಾಮಕಾರಿಯಾಗಿ ಶಿಕ್ಷಣ ನೀಡಬೇಕು : ಹೆಚ್.ಎಸ್. ಗಿರಿಜಾಂಬ

ಮೈಸೂರು : ಶಿಕ್ಷಕರು ಸ್ಮಾರ್ಟ್ ಬೋರ್ಡ್ ಹಾಗೂ ಕಂಪ್ಯೂಟರ್ ತರಬೇತಿ ಕಲಿಕೆಯನ್ನು ಹೆಚ್ಚಿನ ರೀತಿಯಲ್ಲಿ ಪಡೆದುಕೊಂಡು ಆಶ್ರಮ ಶಾಲೆಯ ಮಕ್ಕಳಿಗೆ ಪರಿಣಾಮಕಾರಿಯಾಗಿ ಶಿಕ್ಷಣವನ್ನು ನೀಡಬೇಕು ಎಂದು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ಉಪನಿರ್ದೇಶಕಿ ಹೆಚ್.ಎಸ್. ಗಿರಿಜಾಂಬ ತಿಳಿಸಿದರು.
ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ವತಿಯಿಂದ ಟಿ.ನರಸೀಪುರ ರಸ್ತೆಯಲ್ಲಿರುವ ಮೈಸೆಮ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬುಧವಾರ ನಡೆದ ಮಹರ್ಷಿ ವಾಲ್ಮೀಕಿ ಆಶ್ರಮ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಗ್ಲಿಷ್, ಗಣಿತ ಮತ್ತು ವಿಜ್ಞಾನ ಶಿಕ್ಷಕರಿಗೆ ಸ್ಮಾರ್ಟ್ ಬೋರ್ಡ್, ಕಂಪ್ಯೂಟರ್ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾನಾಡಿದ ಅವರು ಈ ತರಬೇತಿಗೆ ಮೈಸೂರು, ಕೊಡಗು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ 50 ಜನ ಶಿಕ್ಷಕರು  ಬಂದಿದ್ದು, ಶಿಕ್ಷಕರು ಆಧುನಿಕ ಡಿಜಿಟಲ್ ಉಪಕರಣಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಬುಡಕಟ್ಟು ಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಸರ್ಕಾರ ಈ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದ್ದು, ಇದರ ಸದುಪಯೋಗವನ್ನು ಶಿಕ್ಷಕರು ಉಪಯೋಗಿಸಿಕೊಳ್ಳಬೇಕು ಎಂದರು.
ಮೈಸೆಮ್ ಕಾಲೇಜಿನ ಪ್ರಾಂಶುಪಾಲರಾದ ಡಾ|| ಮಂಜುನಾಥ್ ಟಿ.ಎಸ್. ಮಾತನಾಡಿ ಸ್ಮಾರ್ಟ್ ಬೋರ್ಡ್ ಮತ್ತು ಕಂಪ್ಯೂಟರ್ ತರಬೇತಿಗೆ ಬೇಕಾದ ಎಲ್ಲಾ ಸಹಕಾರವನ್ನು ನೀಡುತ್ತೇವೆ. ನಮ್ಮಲ್ಲಿರುವ ನುರಿತ ಪ್ರೋಫೆಸರ್‌ಗಳು ತರಬೇತಿ ನೀಡುತ್ತಾರೆ. ಇದರ ಸದುಪಯೋಗವನ್ನು ಶಿಕ್ಷಕರು ಪಡೆದುಕೊಳ್ಳಬೇಕು ಎಂದರು.
ಸಮಾರಂಭದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ಶಿಕ್ಷಕರಾದ ಮಧುಸೂದನ್ ಕಾಲೇಜಿನ ಫ್ರೊ. ಡಾ|| ಜಯರಾಂ, ಡಾ. ಹರ್ಷಕುಮಾರ್, ಪ್ರೊ. ಅಶ್ವಿನಿ, ಪ್ರೊ. ಬಿ.ಆರ್. ಸಂತೋಷ್, ಪ್ರೊ. ಮಾಧುರಿ, ಪ್ರೊ. ಪ್ರಜ್ವಲ್, ನಾಗೇಂದ್ರ ಹಬ್ಬಾರ್ ಸ್ವಾಗತಿಸಿದರು. ಭರತ್‍ಕುಮಾರ್, ಮಮತ, ಸಿದ್ದರಾಜು ಹಾಜರಿದ್ದರು.

Call Now Button