ಮೈಸೂರು : ನಂಜನಗೂಡು ತಾಲೂಕಿನ ಹನುಮನಪುರ ಗೇಟ್ ಬಳಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ದ್ವಿಚಕ್ರ ಸವಾರರು ಸ್ಥಳದಲ್ಲಿ ಮೃತಪಟ್ಟಿದ್ದಾರೆ.
ಮೈಸೂರಿನ ಜೆ.ಪಿ.ನಗರದ ನಿವಾಸಿ ಚಂದ್ರು (38) ಹಾಗೂ ನಡುಕಲು ಮೊಳೆ ಗ್ರಾಮದ ಶೀಲಾ (35) ಮೃತಪಟ್ಟ ದುರ್ದೈವಿಗಳು.
ಚಂದ್ರು ಮತ್ತು ಶೀಲಾ ಬೈಕ್ ನಲ್ಲಿ ಸಂತೇಮರಹಳ್ಳಿ ಕಡೆಗೆ ತೆರಳುತ್ತದ್ದಾಗ ಚುಂಚನಹಳ್ಳಿ ಕಡೆಗೆ ಹೋಗುತ್ತಿದ್ದ ಗೊಬ್ಬರ ತುಂಬಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿದೆ. ಹನುಮನಪುರ ಗೇಟ್ ಬಳಿಯ ತಿರುವಿನಲ್ಲಿ ಈ ಘಟನೆ ನಡೆದು ಬೈಕ್ ಮೇಲೆ ಲಾರಿ ಹರಿದಿದೆ.
ಸ್ಥಳಕ್ಕೆ ಡಿವೈಎಸ್ಪಿ ರಘು, ಸಿಪಿಐ ಚಂದ್ರಶೇಖರ್, ಕವಲಂದೆ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜು, ಎಸ್.ಬಿ ರಮೇಶ್ ಮತ್ತು ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದರು. ಶವಗಳು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

