ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಉನ್ನತೀಕರಣಗೊಳಿಸಲು 180 ಕೋಟಿ ರೂ.ಗಳ ಅನುದಾನ ಮೀಸಲಿಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ರಾಜ್ಯ ಬಜೆಟ್ ಮಂಡಿಸಿದ ಅವರು, ಜನ ಸಂಖ್ಯೆ ಮತ್ತು ಬೇಡಿಕೆಗೆ ಅನುಗುಣವಾಗಿ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಈಗಿರುವ 400 ಹಾಸಿಗೆ ಸಾಮರ್ಥ್ಯವನ್ನು 600 ಹಾಸಿಗೆಗೆ ಹೆಚ್ಚಿಸಲಾಗುವುದು ಹಾಗೂ ಅಗತ್ಯ ಯಂತ್ರೋಪಕರಣಗಳನ್ನು ಖರೀದಿಸಲು 180 ಕೋಟಿ ರೂ.ಗಳನ್ನು ಮೀಸಲಿಡಲಾಗುವುದು ಎಂದರು. ಅಲ್ಲದೆ, ಮೈಸೂರು ತಾಲೂಕಿನ ತಾಂಡವಪುರದಲ್ಲಿ ಸಿಲ್ಕ್ ಪಾರ್ಕ್ ಸ್ಥಾಪನೆ ಆಗಲಿದೆ ಎಂದು ತಿಳಿಸಿದರು.
ಚಾಮರಾಜನಗರದ ಹನೂರು ತಾಲ್ಲೂಕಿನಲ್ಲಿ ಅಂತರ್ಜಲ ಹೆಚ್ಚಿಸಿ ಕುಡಿಯುವ ನೀರು ಹಾಗೂ 12 ಸಾವಿರ ಎಕರೆ ಬಾಧಿತ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಒದಗಿಸಲು ಉಡುತೊರೆಹಳ್ಳ ಯೋಜನೆಯನ್ನು 490 ಕೋಟಿ ರೂ. ಮೊತ್ತದಲ್ಲಿ ಕೈಗೆತ್ತಿಕೊಳ್ಳಲಾಗುವುದು.


