ಬೆಂಗಳೂರು : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರಾಜ್ಯಕ್ಕೆ ಭೇಟಿ ನೀಡಿದ ಸ್ಥಳಗಳಲ್ಲಿ ಸಿಬಿಎಸ್ಸಿ ಪಠ್ಯಕ್ರಮ ಒಳಗೊಂಡ ನಾಲ್ಕು ವಸತಿ ಶಾಲೆಗಳ ನಿರ್ಮಾಣದ ಜೊತಗೆ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ರಾಜ್ಯ ಬಜೆಟ್ನಲ್ಲಿ ಈ ವಿಷಯ ಪ್ರಸ್ತಾಪಿಸಿರುವ ಸಿಎಂ, ಡಾ. ಅಂಬೇಡ್ಕರ್ ಅವರು ರಾಜ್ಯಕ್ಕೆ ಭೇಟಿ ನೀಡಿದ ಗುಲ್ಬರ್ಗ, ವಿಜಯಪುರ, ಕಲಬುರಗಿ, ಕೋಲಾರದಲ್ಲಿ ಡಾ. ಅಂಬೇಡ್ಕರ್ ಹೆಸರಿನಲ್ಲಿ ಸಿಬಿಎಸ್ಸಿ ಪಠ್ಯಕ್ರಮ ಒಳಗೊಂಡ ವಸತಿ ಶಾಲೆ ಸ್ಥಾಪಿಸಲಾಗುವುದು ಎಂದರು.
ಅಲ್ಲದೆ, ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಧಾರೆಗಳು ಅತ್ಯ ಧರ್ಮಿಯರಿಗೂ ತಲುಪಿಸುವ ಉದ್ದೇಶದಿಂದ ಅಂಬೇಡ್ಕರ್ ಅವರ ಪುಸ್ತಕಗಳನ್ನು ಉರ್ದು ಭಾಷೆಗೆ ಅನುವಾದ ಮಾಡಲಾಗುವುದು ಎಂದು ಹೇಳಿದರು.


