ಬೆಂಗಳೂರು: ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲಿನ ಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯ ತಡೆಗೆ ರೋಹಿತ್ ವೇಮುಲ ಕಾಯ್ದೆಯನ್ನು ಜಾರಿಗೊಳಿಸಲು ನಿರ್ಧರಿಸಲಾಗಿದೆ. ಈ ಸಾಲಿನ ಬಜೆಟ್ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಘೋಷಣೆ ಮಾಡಿದ್ದಾರೆ.
ಅಲ್ಲದೆ, ಕಾಲೇಜಕು ಮತ್ತು ವಿಶ್ವ ವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲೂ ಸಹ ನಿರ್ಧರಿಸಲಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ಧಾರವಾಡ ಮತ್ತು ಬೆಂಗಳೂರಿನಲ್ಲಿ ಡಿಜಿಟಲ್ ಲೈಬ್ರತಿ ಹಾಗೂ ಅಧ್ಯಯನ ಕೇಂದ್ರ ಸ್ಥಾಪನೆ ಮಾಡಲಾಗುವುದು.
ಎಡಿಬಿ ನೆರವಿನಡಿ 40 ಪದವಿ ಕಾಲೇಜು ಹಾಗೂ 11 ಪಾಲಿಟೆಕ್ನಿಕ್ಗಳ ಅಭಿವೃದ್ಧಿ ಹಾಗೂ 9 ಉತ್ಕೃಷ್ಟತಾ ಕೇಂದ್ರ ಸ್ಥಾಪನೆಯ ಜೊಗೆಗೆ ವಿಶ್ವ ವಿದ್ಯಾಲಯಗಳಲ್ಲಿ 1 ಸಾವಿರ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಗುರಿ ಹೊಂದಲಾಗಿದೆ.
ಮೈಸೂರು ನಗರದ ನರಸಿಂಹರಾಜ ಕ್ಷೇತ್ರ ಸೇರಿದಂತೆ ಚಡಚಣ, ಬೆಳಗಾವಿ ಹಾಗೂ ಮಸ್ಕಿಯಲ್ಲಿ ಪ್ರಥಮ ದರ್ಜೆ ಕಾಲೇಜು ಸ್ಥಾಪನೆ, ಸರಕಾರಿ ಶಾಲಾ-ಕಾಲೇಜುಗಳಲ್ಲಿ ಅಧ್ಯಯನ ಮಾಡಿ ಉನ್ನತ ಶಿಕ್ಷಣ ಮುಂದುವರೆಸುತ್ತಿರುವ ವಿದ್ಯಾರ್ಥಿನಿಯರಿಗೆ 30 ಸಾವಿರ ರೂ.ಗಳ ವಿದ್ಯಾರ್ಥಿ ವೇತನ ನೀಡಲು ತೀರ್ಮಾನಿಸಲಾಗಿದೆ.


