Online News in ಕನ್ನಡ

ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿ ವರ್ಚಸ್ಸು ಕುಸಿತ : ಸುರ್ಜೆವಾಲ

ಬೆಂಗಳೂರು: ಡಾಲರ್‌ ಎದುರು ರೂಪಾಯಿ ಮೌಲ್ಯ ಐತಿಹಾಸಿಕ ಕುಸಿತ ಕಂಡಿದ್ದು ಭಾರತದ ಇತಿಹಾಸದಲ್ಲಿಯೇ ಮೊದಲ ಬಾರಿ. ಅಮೇರಿಕಾದ ಒಂದು ಡಾಲರ್‌ಗೆ ಭಾರತದ ರೂಪಾಯಿ ಮೌಲ್ಯ ೯೩ರ ಗಡಿ ದಾಟಿದೆ. ರೂಪಾಯಿ ಮೌಲ್ಯದ ಜೊತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿಯ ವರ್ಚಸ್ಸೂ ಕುಸಿದೆ. ಭಾರತದ ಇಂತಹ ಸ್ಥಿತಿಗೆ ಪ್ರಧಾನ ನರೇಂದ್ರ ಮೋದಿ ಅವರೇ ನೇರ ಹೊಣೆ ಎಂದು ಕರ್ನಾಟಕದ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲ ಆರೋಪಿಸಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಲ್‌ಪಿಜಿ ಇಲ್ಲದೆ ದೇಶದ ಜನರು ಪರದಾಡುತ್ತಿದ್ದಾರೆ. ರೂಪಾಯಿ ಬೆಲೆ ಸಹ ಕುಸಿದಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ಮತ್ತು ರಾಜ್ಯದ ಬಿಜೆಪಿ ಸಂಸದರು ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.
ಉಪ ಚುನಾವಣೆ ಟಿಕೆಟ್‌ ಬಿಕ್ಕಟ್ಟು:
ಬಾಗಲಕೋಟೆ ಮತ್ತು ದಾವಣಗೆರೆಯಲ್ಲಿ ನಡೆಯುತ್ತಿರುವ ಉಪ ಚುನಾವಣೆ ಹಿನ್ನಲ್ಲೆಯಲ್ಲಿ ಕಾಂಗ್ರೆಸ್‌ನಲ್ಲಿ ಟಿಕೆಟ್‌ ಬೇಡಿಕೆ ಹೆಚ್ಚಿದ್ದು ಎಲ್ಲರಿಗೂ ನ್ಯಾಯ ಒದಗಿಸಿಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

Call Now Button