ಬಾಗಲಕೋಟೆ: ಒಳ ಮೀಸಲಾತಿ ವಿಷಯದಲ್ಲಿ ಎಡಗೈ ಮತ್ತು ಬಲಗೈ ಸೇರಿದಂತೆ ಯಾವ ಸಮುದಾಯಕ್ಕೂ ಅನ್ಯಾಯವಾಗಲು ನಮ್ಮ ಸರಕಾರ ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಬಾಗಲಕೋಟೆ ಉಪ ಚುನಾವಣಾ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡು ಮುಗುಳೊಳ್ಳಿ ಮತ್ತು ನೀಲಾ ನಗರ ಗ್ರಾಮ ಹಾಗೂ ಸುತ್ತ ಮುತ್ತಲ ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮಾತನಾಡಿದ ಅವರು, ಸಾಮಾಜಿಕ ನ್ಯಾಯ ಎತ್ತಿ ಹಿಡಿಯುವುದೇ ನಮ್ಮ ಸರಕಾರದ ಪರಮ ಗುರಿ ಎಂದು ತಿಳಿಸಿದರು.
ನೀಲನಗರ ಗ್ರಾಮದಲ್ಲಿ ನೆಲೆಸಿರುವ ಲಂಬಾಣಿ ಸಮುದಾಯಕ್ಕೆ ಮೀಸಲಾತಿಯಲ್ಲಿ ಅನ್ಯಾಯವಾಗದು. ಹಾಗೆಯೇ ಒಳ ಮೀಸಲಾತಿ ವಿಷಯದಲ್ಲಿ ಎಡಗೈ ಮತ್ತು ಬಲಗೈ ಸಮುದಾಯಗಳಿಗೆ ಅನ್ಯಾಯವಾಗುವುದಿಲ್ಲ. ಎಲ್ಲ ಸಮುದಾಯಗಳಿಗೂ ಸಮಾನ ಅವಕಾಶ ನೀಡಲು ನಾವು ಬದ್ಧವಿದ್ದೇವೆ. ಈ ವಿಷಯದಲ್ಲಿ ರಾಜಕೀಯ ಮಾಡುವುದು ಬೇಡ ಎಂದರು.
ಒಳ
ಬಾಗಲಕೋಟೆ : ನಮ್ಮ ಜನಪರವಾದ ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿ ಸೇರಿ ಬಿಜೆಪಿ ನಾಯಕರು ಅಣಕಿಸಿದ್ದಾರೆ. ಆದರೆ, ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ. ನಮ್ಮದು ಪಕ್ಷಾತೀತವಾದ ಅಭಿವೃದ್ಧಿಪರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.

ಬಿಜೆಪಿಯವರಿಗೆ ಬಡವರ, ಮಹಿಳೆಯರ ಕಷ್ಟ ಗೊತ್ತಿಲ್ಲ. ಅದಕ್ಕೇ ಅವರು ಅಧಿಕಾರದಲ್ಲಿದ್ದಾಗ ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ದಲಿತರಿಗೆ ಮೀಸಲಾತಿ ತಂದವರು ನಾವು. ಬಿಜೆಪಿ ತರಲಿಲ್ಲ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಕಾಂಗ್ರೆಸ್ ಪಕ್ಷ. ಬ್ರಿಟೀಷರ ಜೊತೆ ಸೇರಿದ್ದ ಬಿಜೆಪಿಯವರು ದೇಶದ ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಭಾಗಿಯಾಗಲೇ ಇಲ್ಲ. 1925 ರಲ್ಲೇ RSS ಸ್ಥಾಪನೆ ಆಗಿದ್ದರೂ ಬ್ರಿಟೀಷರ ವಿರುದ್ಧ RSS ಧ್ವನಿ ಎತ್ತಲಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಲಿಲ್ಲ. ಇದು ಕಾಂಗ್ರೆಸ್ ನ ಹೋರಾಟದ ಪರಂಪರೆ ಮತ್ತು ಕಾಂಗ್ರೆಸ್ ಪಕ್ಷದ ಇತಿಹಾಸ ಎಂದರು.
ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದರಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಾಮಾಜಿಕ ನ್ಯಾಯದ ಸಂವಿಧಾನ ದೇಶದಲ್ಲಿ ಜಾರಿಯಾಗಲು ಸಾಧ್ಯವಾಯಿತು ಎಂದರು. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ ಬರಲಿಲ್ಲ. ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದರೂ ಬಡವರ, ಹಿಂದುಳಿದವರ ಅಭಿವೃದ್ಧಿಗೆ ಕೆಲಸ ಮಾಡಲೇ ಇಲ್ಲ ಎಂದರು.
ಮಾತೆತ್ತಿದರೆ ಡಬಲ್ ಎಂಜಿನ್ ಸರ್ಕಾರ ಎನ್ನುತ್ತಿದ್ದರು. ಆದರೆ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಕೃಷ್ಣ ಮೇಲ್ದಂಡೆ ಮತ್ತು ಆಲಮಟ್ಟಿ ವಿಚಾರದಲ್ಲಿ ಜನವಿರೋಧಿ ನಿಲುವು ಹೊಂದಿದ್ದರಿಂದಲೇಹದಿಮೂರು ವರ್ಷಗಳಿಂದ ಗೆಜೆಟ್ ನೋಟಿಫಿಕೇಶನ್ ಕೂಡ ಮಾಡಲಿಲ್ಲ. ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗಲೂ ಭೂ ಪರಿಹಾರ ಘೋಷಿಸಿದರೂ ಹಣ ನೀಡಲಿಲ್ಲ. ನಾನು ಮುಖ್ಯಮಂತ್ರಿಯಾಗಿ ಸಭೆ ನಡೆಸಿ ಎಕರೆ ನೀರಾವರಿ ಜಮೀನಿಗೆ 40ಲಕ್ಷ, ಒಣ ಭೂಮಿಗೆ 30 ಲಕ್ಷ ರೂ ಪರಿಹಾರ ಕೊಡುವ ತೀರ್ಮಾನ ಮಾಡಿ ಕೆಲಸ ಪ್ರಾರಂಭ ಮಾಡಿದ್ದು ಮೂರು ವರ್ಷದಲ್ಲಿ ಪರಿಹಾರ ಕೊಡುತ್ತೇವೆ ಎಂದು ಭರವಸೆ ನೀಡಿದರು.

