Online News in ಕನ್ನಡ

ವಿ.ಸೋಮಣ್ಣ ಓರ್ವ ಕೆಲಸವಿಲ್ಲದ ಕೇಂದ್ರ ಸಚಿವ: ಸಿಎಂ ಸಿದ್ದರಾಮಯ್ಯ ತಿರುಗೇಟು

ಬಾಗಲಕೋಟೆ : ಕೇಂದ್ರ ಸಚಿವ ವಿ. ಸೋಮಣ್ಣ ಬಿಜೆಪಿಯಲ್ಲಿ ಕೆಲಸ ಇಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.
ಅವರು ಇಂದು ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಸೋಲುತ್ತಾರೆಂದು ತಿಳಿದು ಮುಖ್ಯಮಂತ್ರಿಗಳನ್ನು ಐದು ದಿನ ಪ್ರಚಾರಕ್ಕೆ ಇಳಿಸಿದ್ದಾರೆ ಹಾಗೂ ಒಂದೂವರೆ ತಿಂಗಳು ಮಾತ್ರ ಸಿಎಂ ಅಧಿಕಾರದಲ್ಲಿರುತ್ತಾರೆ ಎಂಬ ಕೇಂದ್ರ ಸಚಿವ ವಿ.ಸೋಮಣ್ಣ ಅವರ ಹೇಳಿಕೆಗೆ ಉತ್ತರಿಸಿದ ಸಿಎಂ, ಸೋಮಣ್ಣ ಅವರಿಗೆ ಪ್ರಚಾರ ಮಾಡಲು ಸಮಯವಿಲ್ಲ. ಕ್ಷೇತ್ರದಲ್ಲಿ ಸೋಲುತ್ತೇವೆ ಎಂದು ತಿಳಿದಿರುವುದರಿಂದ ಹೆಚ್ಚು ಪ್ರಚಾರ ಮಾಡುತ್ತಿಲ್ಲ. ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಮಾತನಾಡಲು ಅವರೇನು ಕಾಂಗ್ರೆಸ್ ಹೈ-ಕಮಾಂಡ್ ಅಲ್ಲ ಎಂದರು.
ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ಅವರ ಮಾತಿನಲ್ಲಿ ಸತ್ಯವಿಲ್ಲ ಹಾಗೂ ಹೇಳಿದಂತೆ ನಡೆದುಕೊಳ್ಳುತ್ತಿಲ್ಲವಾದ್ದರಿಂದ ಅವರ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡುವುದಿಲ್ಲ. ಬಾಗಲಕೋಟೆ ಕ್ಷೇತ್ರದಲ್ಲಿ ಬಿಜೆಪಿ ಸೋಲುತ್ತಿವೆ ಎಂಬ ಭಯದಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದರು.

Call Now Button