Online News in ಕನ್ನಡ

ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ: ಪಾಸ್‌ ಪ್ರಮಾಣ ಶೇ.12ರಷ್ಟು ಹೆಚ್ಚಳ

ಬೆಂಗಳೂರು: ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಫಲಿತಾಂಶದಲ್ಲಿ ಈ ಬಾರಿ ದಾಖಲೆಯ ಹೆಚ್ಚಳವಾಗಿದೆ.

ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ ನೋಡಲು https://karresults.nic.in  
2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ದಾಖಲೆ ಮಟ್ಟದಲ್ಲಿ ಏರಿಕೆ ಕಂಡಿದ್ದು, ಕಳೆದ ವರ್ಷಕ್ಕಿಂತ ಶೇ. 12 ರಷ್ಟು ಹೆಚ್ಚು ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ.
ಈ ವರ್ಷ ಶೇ.86ರಷ್ಟು ಮಕ್ಕಳು ಉತ್ತೀರ್ಣರಾಗಿದ್ದಾರೆ. ಅಂದರೆ 7,10,363 ವಿದ್ಯಾರ್ಥಿಗಳ ಪೈಕಿ 6.10 ಲಕ್ಷ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಳೆದ ವರ್ಷ ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರು. ಇದರೊಂದಿಗೆ ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಭಾರೀ ಸುಧಾರಣೆ ಕಂಡು ಬಂದಿದೆ.
2025-26ನೇ ಸಾಲಿನ ದ್ವಿತೀಯ ಪಿಯು ಪರೀಕ್ಷೆ -1 ಫೆಬ್ರವರಿ 28ರಿಂದ ಆರಂಭವಾಗಿ ಮಾರ್ಚ್‌ 17ರವರೆಗೆ 1217 ಪರೀಕ್ಷಾ ಕೇಂದ್ರಗಳಲ್ಲಿ ನಡೆದಿದ್ದವು. 5174 ಕಾಲೇಜುಗಳ 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೋಂದಣಿ ಮಾಡಿಕೊಂಡಿದ್ದರು. ವಿಜ್ಞಾನ ವಿಷಯದಲ್ಲಿ 2.92 ಲಕ್ಷ, ವಾಣಿಜ್ಯ ವಿಭಾಗದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.

Call Now Button