Online News in ಕನ್ನಡ

ರಾಜ್ಯಕ್ಕೆ ಬಂದ ಪ್ರಧಾನಿ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಕೊಟ್ಟ ಮನವಿ ಏನು ?

ಬೆಂಗಳೂರು: ರಾಜ್ಯಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬರಮಾಡಿಕೊಂಡು ರಾಜ್ಯದ ಬೇಡಿಕೆಗಳ ಮನವಿ ಪತ್ರವನ್ನು ಸಲ್ಲಿಸಿದ್ದಾರೆ.
ಬೆಂಗಳೂರಿನ ಹೆಚ್‌ಸಿಎಲ್‌ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಅವರನ್ನು ಮುಖ್ಯಮಂತ್ರಿಗಳು ಆತ್ಮೀಯವಾಗಿ ಬರಮಾಡಿಕೊಂಡರು. ಹಾಗೂ ಪರಸ್ಪರ ಕುಶಲೋಪಚಾರ ವಿಚಾರಿಸಿದರು.


ಸಿಎಂ ಸಲ್ಲಿಸಿದ ಮನವಿಯಲ್ಲಿ ಮೊದಲು ಕೋಲಾರ ಜಿಲ್ಲೆಯಲ್ಲಿ ರೈಲ್ವೆ ಕೋಚ್‌ ಫ್ಯಾಕ್ಟರಿ, ಬೆಂಗಳೂರು-ಮೈಸೂರು ನಡುವೆ ಸ್ಪೀಡ್‌ ಟ್ರೇನ್‌ ಹಾಗೂ ಬೆಂಗಳೂರು-ಮುಂಬೈ ನಡುವೆ ಹೈ-ಸ್ಟೀಡ್‌ ರೈಲು ಕಾರಿಡಾರ್‌ ಯೋಜನೆಗೆ ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ.
ಅಲ್ಲದೆ, ರಾಜ್ಯಕ್ಕೆ ಕೇಂದ್ರದಿಂದ ಬರಬೇಕಾದ ಅನುದಾನವೂ ಸೇರಿದಂತೆ ಸುಮಾರು 18 ಬೇಡಿಕೆಗಳ ಪಟ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದರು.

Call Now Button