ಚೆನ್ನೈ: ತಮಿಳುನಾಡಿನಲ್ಲಿ ಸರಕಾರ ರಚನೆಗೆ ಹಕ್ಕು ಮಂಡಿಸಿರುವ ಟಿವಿಕೆ ಪಕ್ಷದ ಮುಖ್ಯಸ್ಥ, ಖ್ಯಾತ ನಟ ಜೋಸೆಫ್ ವಿಜಯ್ ಮೇ ೭ರ (ಗುರುವಾರ) ಬೆಳಗ್ಗೆ ೧೧.೩೦ಕ್ಕೆ ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ದ್ರಾವಿಡ ನೆಲದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇಂದು ನಟ ನಾಯಕ ವಿಜಯ್ ಅವರು ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅವರನ್ನು ಭೇಟಿ ಮಾಡಿ ನೂತನ ಸರಕಾರ ರಚನೆಗೆ ಹಕ್ಕು ಮಂಡಿಸಿದರು. ಮಧ್ಯಾಹ್ನ ೩.೩೦ಕ್ಕೆ ಲೋಕಭವನಕ್ಕೆ ಆಗಮಿಸಿದ ವಿಜಯ್ ಅವರೊಂದಿಗೆ ಕಾಂಗ್ರೆಸ್ ಮತ್ತು ಇತರ ಪಕ್ಷಗಳ ಬೆಂಬಲದೊಂದಿಗೆ ಸರಕಾರ ರಚಿಸುವುದಾಗಿ ಮನವಿ ಪತ್ರ ಸಲ್ಲಿದ್ದಾರೆ.
ಇನ್ನು ಸರಕಾರ ರಚನೆ ವಿಷಯದ ಬಗ್ಗೆ ಟಿವಿಕೆ ಸಂಸ್ಥಾಪಕ ವಿಜಯ್ ಅವರು ನಾಳೆ (ಮೇ ೭) ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭಕ್ಕೆ ಈಗಾಗಲೇ ಟಿವಿಕೆಗೆ ಬೆಂಬಲ ಘೋಷಿಸಿರುವ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಸಹ ಆಗಮಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.


