ಬೆಂಗಳೂರು: ಎಲ್ಲವೂ ಸುಸೂತ್ರವಾಗಿ ನೆರವೇರಿತು ಎನ್ನುವಷ್ಟರಲ್ಲಿ ಖಾತೆ ಹಂಚಿಕೆಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ತಮಗೆ ನೀಡಿದ್ದ ಭರವಸೆಯನ್ನು ಈಡೇರಿಸದ ಹಿನ್ನಲೆಯಲ್ಲಿ ಆತ್ಮಸಾಕ್ಷಿಗೆ ಅನುಗುಣವಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿತುವುದಾಗಿ ಘೋಷಿಸಿದ್ದಾರೆ.
ಮಾಧ್ಯಮಗೋಷ್ಟಿ ಕರೆದು ರಾಜೀನಾಮೆ ಪತ್ರ ಪ್ರದರ್ಶಿಸಿದ ಸಚಿವ ರಾಮಲಿಂಗಾ ರೆಡ್ಡಿ, ನಾನೂ ಶಾಸಕನಾಗಿ, ಕಾಂಗ್ರೆಸ್ ನಲ್ಲೇ ಮುಂದುವರೆಯುತ್ತೇನೆ ಎಂದು ಹೇಳಿದ್ದಾರೆ.
ಸರಕಾರ ರಚನೆಯ ಪೂರ್ವದಲ್ಲಿ ಡಿಕೆಶಿ ಬ್ರದರ್ಸ್ ನಮ್ಮ ಮನೆಗೆ ಬಂದು ನನಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವುದಾಗಿ ಭರವಸೆ ನೀಡಿದ್ರು. ಹಿಂದೆ ಸಿಎಂ ಆಗಿದ್ದ ಸಿದ್ದರಾಮಯ್ಯ ಅವರೂ ಇದೇ ಖಾತೆ ನೀಡುವುದಾಗಿ ಹೇಳಿದ್ರು. ಆದರೆ, ನನಗೆ ಇಷ್ಟವಿಲ್ಲದ ಖಾತೆ ನೀಡಲಾಗಿದೆ. ಆದ್ದರಿಂದ ನನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ನೇರವಾಗಿ ಹೇಳಿದ್ದಾರೆ.
ನನಗೆ ಯಾರ ಮೇಲೂ ಬೇಸರವಿಲ್ಲ. ನನ್ನ ಆತ್ಮ ಸಾಕ್ಷಿಗೆ ಧಕ್ಕೆಯಾಗಿದೆ. ಆ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಸ್ಪಷ್ಟಪಡಿಸಿದರು.


