ಬಾಗಲಕೋಟೆ: ಬಾಗಲಕೋಟೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಇಂದು ನಾಮಪತ್ರ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಸ್ಥಳೀಯ ನಾಯಕರು ಉಪಸ್ಥಿತರಿದ್ದರು.
ಬಾಗಲಕೋಟೆಗೆ ಸಿಎಂ ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆಯೇ ಅಪಾರ ಸಂಖ್ಯೆಯ ಬೆಂಬಲಿಗರ ಹರ್ಷೋದ್ಗಾರದ ಮೊಳಗಿತು. ನಾಮಪತ್ರ ಸಲ್ಲಿಕೆಯ ನಂತರ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ಹಾಗೂ ಮೇಟಿ ಅವರು ಕ್ಷೇತ್ರಕ್ಕೆ ಮಾಡಿರುವ ಅಭಿವೃದ್ಧಿ ಕಾರ್ಯಗಳಿಂದಾಗಿ ಜನರು ಕಾಂಗ್ರೆಸ್ ಅಭ್ಯರ್ಥಿ, ಮೇಟಿ ಅವರ ಪುತ್ರ ಉಮೇಶ್ ಮೇಟಿ ಅವರನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲ್ ಮತ್ತು ಶಿವಾನಂದ ಪಾಟೀಲ್ ಹಾಗೂ ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಸ್ವಾಮಿ ಜತೆಗಿದ್ದರು.

