Online News in ಕನ್ನಡ

ಮಾರ್ಚ್‌ ೨ರಂದು ಅಂಗನವಾಡಿ ಕಾರ್ಯಕರ್ತರ ಬೆಂಗಳೂರು ಚಲೋ

ಮೈಸೂರು: ರಾಜ್ಯ ಸರಕಾಋದ ೬ನೇ ಗ್ಯಾರಂಟಿಯ ಚುನಾವಣಾ ಪ್ರಣಾಳಿಕೆಯ ಭರವಸೆಯಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ೧೫ ಸಾವಿರ ರೂ. ಹಾಗೂ ಸಹಾಯಕಿಯರಿಗೆ ೧೦ ಸಾವಿರ ರೂ.ಗಳಿಗೆ ಗೌರವ ಧನ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್‌ ೨ರಂದು ಬೆಂಗಳೂರು ಚಲೋ ಹಮ್ಮಿಕೊಂಡಿರುವುದಾಗಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕರಿಯರ ಫೆಡರೇಷನ್‌ನ ಜಿಲ್ಲಾಧ್ಯಕ್ಷೆ ಪಿ.ಎಂ. ಸರೋಜಮ್ಮ ಒತ್ತಾಯಿಸಿದ್ದಾರೆ.
ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂಗನವಾಡಿ ಕೇಂದ್ರಗಳಲ್ಲಿ ಸುದೀರ್ಘ ಸೇವೆ ಸಲ್ಲಿಸಿ ೨೦೧೧ರಿಂದ ನಿವೃತ್ತರಾಗಿರುವ ವಯೋವೃದ್ಧ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ ಜಾರಿಗೊಳಿಸಬೇಕೆಂದು ಮನವಿ ಮಾಡಿದರು.
ಅಂಗನವಾಡಿ ಕೇಂದ್ರಗಳಲ್ಲಿ ಬಿಎಲ್‌ಒಗಳ ದಬ್ಬಾಳಿಕೆಗೆ ಕಡಿವಾಣ ಹಾಕಬೇಕು. ಸರಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಎಲ್‌ಕೆಜಿ-ಯುಕೆಜಿ ತರಗತಿ ನಡೆಸಲು ಅವಕಾಶ ಕೊಟ್ಟಿರುವುದರಿಂದ ಅಂಗನವಾಡಿಗೆ ಬರುವ ಮಕ್ಕಳ ಸಂಖ್ಯೆ ಕ್ಷೀಣಿಸುತ್ತಿದೆ. ಅಂಗನವಾಡುಗಳಿಗೆ ಬರುವ ಮಕ್ಕಳಿಗೆ ಪೌಷ್ಠಿಕ ಆಹಾರ ಮತ್ತು ತಯಾರಿಸಿ ಬಡಿಸಲು ತರಕಾರಿ ವೆಚ್ಚ ಕೇವಲ ೫೦ ಪೈಸೆ ಕೊಡುತ್ತಿದ್ದು ಇದನ್ನು ಬೆಲೆ ಏರಿಕೆಗೆ ತಕ್ಕಂತೆ ಹೆಚ್ಚಿಸಬೇಕೆಂದು ಆಗ್ರಹಿಸಿದರು.
ಈಗಾಗಲೇ ಬೇರೆ ರಾಜ್ಯಗಳಲ್ಲಿರುವಂತೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನಿವೃತ್ತಿ ವಯಸ್ಸನ್ನು ೬೫ಕ್ಕೆ ಹೆಚ್ಚಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಾರ್ಚ್‌ ೨ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ವೈ. ಮಹಾದೇವಮ್ಮ, ಸಿ. ಗಿರಿಜಾ ಮೊದಲಾದವರು ಭಾಗವಹಿಸಿದ್ದರು.

 

Call Now Button