Online News in ಕನ್ನಡ

ಲಾಲ್‍ಬಾಗ್‍ನಲ್ಲಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಅನಾವರಣ

ಬೆಂಗಳೂರು, ಆಗಸ್ಟ್ 7- ಬೆಂಗಳೂರಿನ ಲಾಲ್‍ಬಾಗ್‍ನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದ್ದು, ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟೀಷರ ವಿರುದ್ಧ ಹೋರಾಡಿದ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರಿಗೆ ಗೌರವ ಸಲ್ಲಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರ ಪುತ್ತಳಿಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, 200 ವರ್ಷಗಳ ಹಿಂದೆ ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರು ಬ್ರಿಟೀಷರ ವಿರುದ್ಧ ಹೋರಾಟ ನಡೆಸಿ ದೇಶ ಸ್ವಾತಂತ್ರ್ಯದ ಹೋರಾಟಕ್ಕೆ ನಿಂತ್ತವರು. ಇವರ ಶೌರ್ಯ, ಹೋರಾಟವನ್ನು ಸ್ಮರಿಸುವ ದೃಷ್ಟಿಯಿಂದ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ ಎಂದರು.
ಧರ್ಮಸ್ಥಳದಲ್ಲಿ ಪತ್ರಕರ್ತರ ಮೇಲೆ ಹಲ್ಲೆಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ, ಯಾರೇ ತಪ್ಪು ಮಾಡಿದ್ದರೂ ಕಾನೂನು ರೀತಿ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

Call Now Button