Online News in ಕನ್ನಡ

ಸ್ವಗ್ರಾಮದಲ್ಲಿ ಪಬ್ಲಿಕ್‌ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದ ಸಿಎಂ ಸಿದ್ದು

ಮೈಸೂರು: ಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ನನ್ನ ಊರಿನ ಋಣ ಯಾವಾಗಲೂಸ್ವಗ್ರಾಮ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ ನನ್ನ ಊರಿನ ಋಣ ಯಾವಾಗಲೂ ನನ್ನ ಮೇಲೆ ಇದ್ದೇ ಇರುತ್ತದೆ ಎಂದು ತಿಳಿಸಿದರು.

ನನ್ನ ಊರಿನ ಶಾಲೆಯಲ್ಲಿ ನಾನು ಐದರಿಂದ ಏಳರವರೆಗೆ ಓದಿದ ಶಾಲೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ದತ್ತು ಪಡೆದಿದೆ. ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ನೂತನ ಕಟ್ಟಡವನ್ನು ನಿರ್ಮಿಸಲಾಗಿದೆ. ಈ ಕಟ್ಟಡವನ್ನು ಅತ್ಯಂತ ಸಂತೋಷದಿಂದ ಉದ್ಘಾಟಿಸಿದ್ದೇನೆ ಎಂದರು

ಪ್ರಾರ್ಥಮಿಕ, ಪ್ರೌಢಶಾಲೆ, ಪಿಯು ಕಾಲೇಜು ಇಲ್ಲಿ ನಡೆಯುತ್ತಿದೆ. ಪದವಿ ಕಾಲೇಜಿಗೆ ವಿದ್ಯಾರ್ಥಿಗಳು ದೊರೆಯುವುದಿಲ್ಲ ಎಂದು ಪದವಿ ಕೋರ್ಸು ತೆರೆದಿಲ್ಲ ಎಂದರು. ಆದರೆ ಊರಿನಲ್ಲಿ ಇತರೆ ಸೌಲಭ್ಯಗಳಾದ ಬಿಸಿಎಂ ವಿದ್ಯಾರ್ಥಿ ನಿಲಯ, ಪಶು ಚಿಕಿತ್ಸಾ ಕೇಂದ್ರ , ಗ್ರಂಥಾಲಯ, ಸಮುದಾಯ ಆರೋಗ್ಯ ಕೇಂದ್ರಗಳು ಇವೆ ಎಂದರು.

ಧರ್ಮಸ್ಥಳದ ವಿಚಾರದಲ್ಲಿ ಬಿಜೆಪಿ ರಾಜಕೀಯ

ಬಿಜೆಪಿಯವರು ಧರ್ಮಸ್ಥಳಕ್ಕೆ ಯಾತ್ರೆ ಕೈಗೊಂಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಬಿಜೆಪಿ ರಾಜಕೀಯವಾಗಿ ಯಾತ್ರೆ ಕೈಗೊಂಡಿದೆ. ಅವರಿಗೆ ರಾಜಕೀಯ ಲಾಭ ಸಿಗುತ್ತದೆ ಎಂದು ಭಾವಿಸಿದ್ದಾರೆ. ಆದರೆ ಅದು ಸಿಗುವುದಿಲ್ಲ. ಏಕೆಂದರೆ ಧರ್ಮಸ್ಥಳದ ಬಗ್ಗೆ ನಮಗೆ ಅಪಾರವಾದ ಗೌರವವಿದೆ. ಎಸ್ಐಟಿ ರಚಿಸಿದಾಗ ವಿರೋಧ ಮಾಡದೆ ಇದ್ದವರು, ನಂತರದಲ್ಲಿ ಏನೂ ಸಿಗುವುದಿಲ್ಲ ಎಂದು ತಿಳಿದು ವಿರೋಧಿಸುತ್ತಿದ್ದಾರೆ. ಇದು ಢೋಂಗಿತನ ಎಂದರು.

ಬಿಜೆಪಿ ದಸರಾ ಹಬ್ಬದಲ್ಲೂ ರಾಜಕಾರಣ ಮಾಡುತ್ತಿದೆ
ಮೈಸೂರಿಗೂ ಚಾಮುಂಡಿ ಚಲೋ ಕಾರ್ಯಕ್ರಮ ಹಮ್ಮಿಕೊಂಡಿರುವ ಬಗ್ಗೆ ಮಾತನಾಡಿ, ಬಿಜೆಪಿಯವರು ಹಿಂದುತ್ವ ಗಟ್ಟಿಯಾಗುತ್ತದೆ, ಹಿಂದೂಗಳೆಲ್ಲ ಒಟ್ಟಾಗುತ್ತಾರೆ ಎಂದು ತಿಳಿದಿದ್ದಾರೆ. ನಾನೂ ಕೂಡ ಹಿಂದೂವೇ. ನಮ್ಮೂರಿನಲ್ಲಿ ನಾವು ರಾಮಮಂದಿರ ಕಟ್ಟಿಲ್ಲವೇ? ಎಂದು ಪ್ರಶ್ನಿಸಿದರು. ಹಿಂದುಗಳೆಂದರೆ ರಾಜಕೀಯ, ಅಪಪ್ರಚಾರ ಮಾಡುವುದಲ್ಲ, ಸುಳ್ಳು ಹೇಳುವುದಲ್ಲ. ಯಾರೇ ಆದರೂ ಮನಷ್ಯತ್ವವಿರಬೇಕು ಎಂದರು. ಬಿಜೆಪಿ ದಸರಾ ಹಬ್ಬದಲ್ಲೂ ರಾಜಕಾರಣ ಮಾಡುತ್ತಿದ್ದಾರೆ. ಸುಳ್ಳು ಹೇಳುವುದು ಬಿಟ್ಟು ಬೇರೇನಾದರೂ ಅವರಿಗೆ ಬರುತ್ತದೆಯೇ ಎಂದರು.

ಬಾನು ಮುಷ್ತಾಕ್ ಅವರಿಗೆ ಉದ್ಘಾಟನೆಗೆ ಆಹ್ವಾನ
ಬಾನು ಮುಷ್ತಾಕ್ ಅವರಿಗೆ ಬುಕರ್ ಪ್ರಶಸ್ತಿ ದೊರಕಿದ್ದು, ಎಷ್ಟು ಜನಕ್ಕೆ ಈ ಪ್ರಶಸ್ತಿ ಲಭಿಸಿದೆ ಎಂದ ಮುಖ್ಯಮಂತ್ರಿಗಳು, ಅವರನ್ನು ಗೌರವಿಸಲು ದಸರಾ ಉದ್ಘಾಟನೆಗೆ ಅವಕಾಶ ನೀಡಲಾಗಿದೆ ಎಂದವರು. ದಸರಾ ಮೇಲೆ ರಾಜಕಾರಣ ಯಾವುದೇ ಪರಿಣಾಮ ಬೀರುವುದಿಲ್ಲ. ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯೇ ಇರಬಹುದು. ದಸರಾ ಹಬ್ಬ ನಾಡ ಹಬ್ಬವಲ್ಲವೇ? ನಾಡ ಹಬ್ಬ ಎಂದರೆ ಎಲ್ಲರೂ ಸೇರಿ ಮಾಡುವುದು. ಹಿಂದೂ, ಮುಸಲ್ಮಾನರು, ಕ್ರಿಶ್ಚಿಯನ್ನರು, ಬೌದ್ಧರು ಸೇರಿ ಆಚರಿಸುವ ಹಬ್ಬ ಎಂದರು.

ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ, ವಿಷಯ ಇರುವುದು ಚಾಮುಂಡಿ ಬೆಟ್ಟದ್ದಲ್ಲ, ದಸರಾ ಹಬ್ಬದ್ದು ಎಂದರು. ಈ ವೇಳೆ ಸಚಿವರಾದ ವೆಂಕಟೇಶ್ ಮತ್ತು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Call Now Button