Online News in ಕನ್ನಡ

ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ; ಮುಖ್ಯಾಂಶಗಳು ಇಂತಿವೆ…

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರಸ್ತುತ ಚರ್ಚೆಯಲ್ಲಿ ಇರುವ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಗಣತಿಯ ಬಗ್ಗೆ ವಿಶೇಷ ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಪತ್ರಿಕಾಗೋಷ್ಠಿಯ ಪ್ರಮುಖ ಅಂಶಗಳು ಈ ಕೆಳಗಿನಂತಿವೆ.

  • ಸೆ. 22 ರಿಂದ ರಾಜ್ಯದಲ್ಲಿ ಹೊಸದಾಗಿ ಜಾತಿ ಗಣತಿ ನಡೆಯಲಿದ್ದು, ಅಕ್ಟೋಬರ್‌ 7 ರ ಒಳಗೆ ಸಮೀಕ್ಷೆ ಪೂರ್ಣಗೊಳಿಸಲು ತೀರ್ಮಾನಿಸಲಾಗಿದೆ.
  • ಜಾಗೃತೆಯಿಂದ, ಯಾವುದೇ ಲೋಪವಾಗದೇ ಸಮೀಕ್ಷೆ ನಡೆಸಿ ವರದಿ ಕೊಡಲು ಈಗಾಗಲೇ ಸರ್ಕಾರದಿಂದ ಸೂಚನೆ ನೀಡಲಾಗಿದೆ.
  • ರಾಜ್ಯದ ಒಟ್ಟು ಜನರ ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಅರಿಯಲು, ಅದರ ಮೂಲಕ ಸಮಾಜದಲ್ಲಿನ ಸೌಲಭ್ಯ ವಂಚಿತರಿಗೆ ಅವಕಾಶ ನೀಡಲು ಕ್ರಮ.
  • ಎಲ್ಲಾ ಜಾತಿ-ಧರ್ಮದವರ ದತ್ತಾಂಶ ಇದ್ದರೆ ಮಾತ್ರ ಸಾಮಾಜಿಕ ನ್ಯಾಯದ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ.
  • ನಾವು ಬಡತನ, ನಿರುದ್ಯೋಗ, ಅನಕ್ಷರತೆ ಹೋಗಲಾಡಿದಲು ಸಂವಿಧಾನದ ಕಲಂ 15, 16(5) ಅಡಿಯಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗುವುದು.
  • ಸಮೀಕ್ಷೆಗಾಗಿ 1,75,000 ಸರ್ಕಾರಿ ಶಾಲಾ ಶಿಕ್ಷಕರನ್ನು ವಿಶೇಷ ಭತ್ಯೆ ನೀಡಿ ಸಮೀಕ್ಷೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದೇವೆ.
  • 325 ಕೋಟಿ ವಿಶೇಷ ಭತ್ಯೆ ಸೇರಿ ಸದ್ಯ 425 ಕೋಟಿ ಹಣ ಕೊಡುವುದಾಗಿ ಹೇಳಿದ್ದೇವೆ, ಹೆಚ್ಚಿನ‌ ಹಣದ ಅಗತ್ಯಬಿದ್ದರೆ ಕೊಡಲು ಸಿದ್ಧ.
  • ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಅನ್ನು ಮೊಬೈಲಿಗೆ ಲಿಂಕ್ ಮಾಡುವುದರ ಜೊತೆಗೆ, ಮೊಬೈಲ್ ಇಲ್ಲದ ಮನೆಗಳಿಗೂ ಹೋಗಿ ಸಮೀಕ್ಷೆ ಮಾಡಲಾಗುವುದು.
  • ಸಮೀಕ್ಷೆ ವೇಳೆ ಒಟ್ಟು 60 ಪ್ರಶ್ನೆಗಳನ್ನು ಫೈನಲ್ ಮಾಡಲಾಗಿದ್ದು ಈ ಪ್ರಶ್ನೆಗಳನ್ನು ಕೇಳಿ ಉತ್ತರ ಪಡೆದು ಸಮೀಕ್ಷೆ ನಡೆಸಲಿದ್ದಾರೆ.
  • ಆಶಾ ಕಾರ್ಯಕರ್ತೆಯರು ನಾಳೆಯಿಂದಲೇ ಮನೆ ಮನೆಗೆ ಹೋಗಿ 60 ಪ್ರಶ್ನೆಗಳ ನಮೂನೆಯನ್ನು ಪ್ರತೀ ಮನೆಗೆ ತಲುಪಿಸುತ್ತಾರೆ. ಬಳಿಕ ಶಿಕ್ಷಕರು ಹೋಗುತ್ತಾರೆ
  • ಗಣತಿದಾರರ ಎದುರು ಜಾತಿ ಹೇಳಿಕೊಳ್ಳಲು ಕಷ್ಟ ಆದವರು ಸಹಾಯವಾಣಿಗೆ ಕರೆ ಮಾಡಿ ಜಾತಿ ಹೆಸರು ಹೇಳಿಕೊಳ್ಳಲು ಅವಕಾಶ ನೀಡಲಾಗಿದೆ.
  • ಯಾವುದೇ ನ್ಯೂನ್ಯತೆಗಳು ಇಲ್ಲದಂತೆ, ಹಿಂದಿನ ಸಮೀಕ್ಷೆಗಳಲ್ಲಿ ಎದುರಾದ ಯಾವುದೇ ತಾಂತ್ರಿಕ ಸಮಸ್ಯೆ ಈ ಬಾರಿ ಇಲ್ಲದಂತೆ ಸಿದ್ಧತೆ ಮಾಡಿಕೊಂಡಿದ್ದೇವೆ
  • ಮತಾಂತರಗೊಂಡವರು ಅಥವಾ ಜಾತಿ ಗೊಂದಲ ಇದ್ದದ್ದನ್ನು ಆಯೋಗದ ತಜ್ಞರ ತಂಡ ವಿಶ್ಲೇಷಣೆ ಮಾಡಿ ತೀರ್ಮಾನಿಸುತ್ತಾರೆ.
Call Now Button