ಬೆಂಗಳೂರು: ರಾಜ್ಯದ 2026ನೇ ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ತಯಾರಿ ನಡೆಸಿದ್ದು, ಪ್ರತಿ ಇಲಾಖೆಗಳ ಪೂರ್ವಭಾವಿ ಸಭೆ ನಡೆಸುತ್ತಿದ್ದಾರೆ. ಇದು ಸಿದ್ದರಾಮಯ್ಯ ಅವರ 17ನೇ ಬಜೆಟ್ ಆಗಿದ್ದು, ದೀರ್ಘಾವಧಿ ಮುಖ್ಯಮಂತ್ರಿ ದಾಖಲೆಯ ಜತೆಗೆ ಅತೀ ಹೆಚ್ಚು ಬಜೆಟ್ ಮಂಡಿಸಿದ ಸಿಎಂ ಎಂಬ ಖ್ಯಾತಿಗೂ ಸಿದ್ದರಾಮಯ್ಯ ಭಾಜನರಾಗಲಿದ್ದಾರೆ.
ಇಂದು ವಿಧಾನಮಂಡಲ ಜಂಟಿ ಅಧಿವೇಶನವನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಿದ ಬಳಿಕ ಬಜೆಟ್ ಸಭೆಯನ್ನು ನಡೆಸುತ್ತಿರುವ ಸಿಎಂ ಸಿದ್ದರಾಮಯ್ಯ, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಪ್ರತ್ಯೇಕ ಸಭೆಗಳನ್ನು ನಡೆಸುತ್ತಿದ್ದು, ಈ ಬಾರಿ ವಿಶೇಷ ಬಜೆಟ್ ಮಂಡನೆಗೆ ಚಿಂತನೆ ನಡೆಸಿದೆ.
ಇಂದು ಅರಣ್ಯ, ಕಾನೂನು, ಪ್ರವಾಸೋದ್ಯಮ, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ, ಕಾರ್ಮಿಕ, ಒಳಾಡಳಿತ, ಹಿಂದುಳಿದ ವರ್ಗಗಳ ಕಲ್ಯಾಣ, ಉನ್ನತ ಶಿಕ್ಷಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಚಿವರು ಹಾಗೂ ಅಧಿಕಾರಿಗಳನ್ನು ಇಂದಿನ ಸಭೆಗೆ ಆಗಮಿಸಿದ್ದಾರೆ.

