ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ನೀರಿನ ಸಮಸ್ಯೆ ಕುರಿತು ಕೆಲವು ಸಮಯದ ಹಿಂದೆ ಮಕ್ಕಳು ಪತ್ರ ಬರೆದು, ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಡುವಂತೆ ನನ್ನಲ್ಲಿ ಮನವಿಗೆ ಸ್ಪಂದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ʻಉಡುತೊರೆಹಳ್ಳ ನೀರಾವರಿ ಯೋಜನೆʼ ಜಾರಿಗೆ 490 ಕೋಟಿ ರೂ. ಮೀಸಲಿಡುವ ಮೂಲಕ ಮಕ್ಕಳ ಮನಗೆದ್ದಿದ್ದಾರೆ.
ಈ ಕುರಿತು ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆಯಲ್ಲಿ ತಮ್ಮ ಭಾವನೆಯನ್ನು ಹಂಚಿಕೊಂಡಿದ್ದಾರೆ.
https://x.com/i/status/2030952736842465283
ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ಮಾಹಿತಿ:
ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಕೆಂಪಯ್ಯನಹಟ್ಟಿ ಗ್ರಾಮದ ನೀರಿನ ಸಮಸ್ಯೆ ಕುರಿತು ಕೆಲವು ಸಮಯದ ಹಿಂದೆ ಮಕ್ಕಳು ಪತ್ರ ಬರೆದು, ಸಮಸ್ಯೆಗೆ ಪರಿಹಾರ ಕಲ್ಪಿಸಿಕೊಡುವಂತೆ ನನ್ನಲ್ಲಿ ಮನವಿ ಮಾಡಿದ್ದರು.
ಮಕ್ಕಳ ಕೋರಿಕೆಯ ಮೇರೆಗೆ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದಾಗ ಆ ಹಳ್ಳಿಗೆ ಸಮರ್ಪಕ ನೀರಾವರಿ ಯೋಜನೆಯೊಂದರ ಅಗತ್ಯತೆ ಕಂಡುಬಂದ ಹಿನ್ನೆಲೆಯಲ್ಲಿ ಈ ಸಾಲಿನ ಬಜೆಟ್ ನಲ್ಲಿ “ಉಡುತೊರೆಹಳ್ಳ ನೀರಾವರಿ ಯೋಜನೆ”ಯನ್ನು ಘೋಷಿಸಿ, ರೂ.490 ಕೋಟಿ ಅನುದಾನವನ್ನು ಸಹ ಮೀಸಲಿಟ್ಟಿದ್ದೇನೆ.
ಅಹವಾಲು ಸಲ್ಲಿಸಿದ ಮಕ್ಕಳ ಧ್ವನಿ ಎಳೆಯದಾದರೂ, ಅದನ್ನು ಕಡೆಗಣಿಸದೆ ಮುಕ್ತವಾಗಿ ಆಲಿಸಿ, ಸಕಾರಾತ್ಮಕವಾಗಿ ಸ್ಪಂದಿಸುವ ತಾಯಿಯ ಹೃದಯ ನಮ್ಮ ಸರ್ಕಾರದ್ದು. ಪುಟಾಣಿ ಮಕ್ಕಳ ಧನ್ಯವಾದವನ್ನು ಅತ್ಯಂತ ಪ್ರೀತಿಯಿಂದ ಸ್ವೀಕರಿಸಿದ್ದೇನೆ.
ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ, ನನ್ನ ಮತ್ತು ನಮ್ಮ ಸರ್ಕಾರದ ಮೇಲೆ ವಿಶ್ವಾಸವಿಟ್ಟು ತಮ್ಮ ಕಷ್ಟವನ್ನು ನಮ್ಮ ಗಮನಕ್ಕೆ ತಂದು, ಇಂದು ಸಾವಿರಾರು ಕುಟುಂಬಗಳ ಭವಿಷ್ಯ ಬದಲಾಗಲು ಕಾರಣರಾದ ಪುಟಾಣಿಗಳಿಗೂ ಪ್ರೀತಿತುಂಬಿದ ಅಪ್ಪುಗೆಗಳು.


