Online News in ಕನ್ನಡ

ಸಿಎಂ ಸಿದ್ದರಾಮಯ್ಯಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್

ಬೆಂಗಳೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ವತಿಯಿಂದ 2024-25ನೇ ಸಾಲಿನ ಡಿವಿಡೆಂಡ್ 77,17,50,000 ರೂ.ಅನ್ನು ಇಂಧನ ಸಚಿವ ಕೆ.ಜೆ ಜಾರ್ಜ್‌ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗುರುವಾರ ಸಲ್ಲಿಸಿದರು.
ಕ್ರೆಡಲ್‌ 2024-25ನೇ ಸಾಲಿನಲ್ಲಿ 257.25 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು, ಲಾಭದ ಶೇ. 30ರಷ್ಟು ಡಿವಿಡೆಂಡ್ 77,17,50,000 ರೂ. ಮೊತ್ತದ ಚೆಕ್‌ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಪಿಸಿಎಲ್‌ ಕಚೇರಿಯಲ್ಲಿ ಸ್ವೀಕರಿಸಿದರು.
ಇದೇ ವೇಳೆ ಕ್ರೆಡಲ್ ವತಿಯಿಂದ ಮಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ. ಮೊತ್ತದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವರು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಕ್ರೆಡಲ್ ಅಧ್ಯಕ್ಷರೂ ಆಗಿರುವ ಶಾಸಕ ಟಿ.ಡಿ. ರಾಜೇಗೌಡ, ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಇದಕ್ಕು ಮುನ್ನ ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರೇಸ್ ಕೋರ್ಸ್ ರಸ್ತೆ ಶಕ್ತಿ ಭವನದಲ್ಲಿ “ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ 305ನೇ ನಿರ್ದೇಶಕರ ಮಂಡಳಿ ಸಭೆ ನಡೆಯಿತು.
ಸಭೆಯಲ್ಲಿ ಇಂಧನ ಸಚಿವ ಕೆ.ಜೆ ಜಾರ್ಜ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ ಹಾಗೂ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಹಾಗೂ ಕೆಪಿಸಿಎಲ್ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Call Now Button