Online News in ಕನ್ನಡ

ದಸರಾ ಉದ್ಘಾಟನೆ; ಬಾನು ಮುಷ್ತಾಕ್ ಅವರಿಗೆ ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ

ಹಾಸನ: ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕರ್ನಾಟಕದ ಪ್ರಸಿದ್ಧ ಸಾಹಿತಿಗಳು ಹಾಗೂ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತರಾದ ಶ್ರೀಮತಿ ಬಾನು ಮುಷ್ತಾಕ್ ಅವರನ್ನು ಜಿಲ್ಲಾಡಳಿತದಿಂದ ಅಧಿಕೃತವಾಗಿ ಬುಧುವಾರ ಆಮಂತ್ರಣ ನೀಡಲಾಯಿತು.

ಹಾಸನದ ಅವರ ನಿವಾಸದಲ್ಲಿ ಅಧಿಕಾರಿಗಳು ಆಹ್ವಾನ ನೀಡಿದರು. ಮೈಸೂರು ಪೇಟ ತೊಡಿಸಿ, ಫಲಫುಷ್ಪ ನೀಡಿ ಸಾಂಪ್ರದಾಯಿಕವಾಗಿ ಸ್ವಾಗತಿಸಿದರು.

ದಸರಾ ವಿಶೇಷಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಎಸ್.ಯುಕೇಶ್ ಕುಮಾರ್, ಅಪರ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಂ.ಜೆ. ರೂಪಾ ಮತ್ತು ಸ್ವಾಗತ ಸಮಿತಿಯವರು ಪಾಲ್ಗೊಂಡಿದ್ದರು.‌

Call Now Button