Online News in ಕನ್ನಡ

ದಸರಾ; ಜಂಬೂಸವಾರಿಗೆ 8ನೇ ಬಾರಿ ಚಾಲನೆ ನೀಡಿದ ಸಿಎಂ ಸಿದ್ದು

ಮೈಸೂರು: ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಿದರು. ಈ ಮೂಲಕ ನಾಡಹಬ್ಬ ದಸರಾಗೆ 8ನೇ ಬಾರಿಗೆ ಚಾಲನೆ ನೀಡಿದ ದಾಖಲೆ ಅವರದ್ದಾಯಿತು.

ತಾಯಿ ಚಾಮುಂಡೇಶ್ವರಿಗೆ ಶುಭಕುಂಭ ಲಗ್ನದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಸಿದ್ದರಾಮಯ್ಯ ಅವರು ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು. ಈ ವೇಳೆ ಮಾನ್ಯ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ. ಮಹದೇವಪ್ಪ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಪುಷ್ಪಾರ್ಚನೆ ಮಾಡಿದರು.

Call Now Button