ದಾವಣಗೆರೆ: ಕಾಂಗ್ರೆಸ್ ಪಕ್ಷವನ್ನೇ ಧಿಕ್ಕರಿಸಿ ಕಳೆದ ಶುಕ್ರವಾರ ನಾಮಪತ್ರ ಸಲ್ಲಿಸಿದ್ದ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ್ ಶಾಮನೂರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಪಕ್ಷದ ಬಿ ಫಾರಂ ಪಡೆದು ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ್ದಾರೆ.
ಈನಡುವೆ, ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರಿಗೆ ಟಿಕೆಟ್ ದೊರಕಲಿದೆ ಎಂಬ ನಿರೀಕ್ಷೆ ಇತ್ತು. ಆದರೆ, ಕಾಂಗ್ರೆಸ್ ಪಕ್ಷ ಶಾಮನೂರು ಕುಟುಂಬದ ಒತ್ತಡಕ್ಕೆ ಮಣಿದ ಹಿನ್ನಲ್ಲೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿರುವ ಮುಸ್ಲಿಂರು ಸಮರ್ಥ್‍ಗೆ ಟಿಕೆಟ್ ನೀಡಿರುವುದನ್ನು ತೀವ್ರವಾಗಿ ಖಂಡಿಸಿದ್ದಾರೆ.
ಅಲ್ಲದೆ, ಕಾಂಗ್ರೆಸ್ ಮುಖಂಡ, ಸಾದಿಕ್ ಪೈಲ್ವಾನ್ ಅವರು ನಾಮಪತ್ರ ಸಲ್ಲಿಸಿವುದಾಗಿ ಪ್ರಕಟಿಸಿದ್ದಾರೆ. ಆಮೂಲಕ ಮುಸ್ಲಿಂ ಸಮುದಾಯದ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದ ಅಲ್ಪ ಸಂಖ್ಯಾತರು ಇದೀಗ ಕಾಂಗ್ರೆಸ್ ಪಕ್ಷದ ವಿರುದ್ಧವೇ ಸಿಡಿದೆದ್ದಿದ್ದಾರೆ. ದಾವಣಗೆರೆಯಲ್ಲಿ ಈ ಬಾರಿ ಅಲ್ಪಸಂಖ್ಯಾತರ ನಡೆ ಬಗ್ಗೆ ತೀವ್ರ ಕುತೂಹಲ ಕೆರಳಿಸಿದ್ದು, ಸ್ವಾಭಿಮಾನ ಜಾಗೃತಿಗೊಂಡರೆ ಕಾಂಗ್ರೆಸ್ ಗೆಲುವಿಗೆ ಭಾರೀ ಕಸರತ್ತು ನಡೆಸಬೇಕಾಗುತ್ತದೆ.
ಈನಡುವೆ, ದಾವಣಗೆರೆಯಲ್ಲಿ ನಡೆಯುತ್ತಿರುವ ಉಪ ಚುನಾವಣೆ `ಶ್ರೀಮಂತಿಕೆ ಮತ್ತು ಶ್ರೀಸಾಮಾನ್ಯ’ ನಡುವಿನ ಸಮರ ಎಂಬ ಬಿಂಬಿಸಿರುವ ಮತದಾರ ಕಾಂಗ್ರೆಸ್ ಪಕ್ಷದ ನಡೆಯ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದೆ. ಸಾಮಾಜಿ ಮಾಧ್ಯಮದಲ್ಲಿ ಇದರ ತೀವ್ರತೆ ಹೆಚ್ಚಾಗಿದೆ.

