Online News in ಕನ್ನಡ

ಹುಣಸೂರಿನಲ್ಲಿ ಹಾಡುಹಗಲೆ ಗುಂಡು ಹಾರಿಸಿ ಕೋಟ್ಯಾಂತರ ರೂ. ಮೌಲ್ಯದ ಆಭರಣ ದರೋಡೆ

ಹುಣಸೂರು : ಪಟ್ಟಣದ ಹೊರವಲಯದ ಚಿನ್ನಾಭರಣ ಅಂಗಡಿ ಕನ್ನ ಹಾಕಿ ಕೋಟ್ಯಾಂತರ ರೂಪಾಯಿ ಚಿನ್ನಾಭರಣ ದರೋಡೆ ಮಾಡಿರುವ ಘಟನೆ ಇಂದು ಹಾಡು ಹಗಲು ಸಂಭವಿಸಿದೆ.

ಹುಣಸೂರಿನ ಬಸ್ ನಿಲ್ದಾಣದ ಹಿಂಭಾಗವಿರುವ ಸ್ಕೈ ಗೋಲ್ಡ್ ಅಂಡ್ ಡೈಮಂಡ್ ಅಂಗಡಿಯ ಮೇಲೆ ಐದು ಮಂದಿ ಮುಸುಕುದಾರಿಗಳು ಅಂಗಡಿ ಮ್ಯಾನೇಜರ್ ಅಜ್ಗರ್ ಮೇಲೆ ರಿವಾಲ್ವಾರ್ ನಿಂದ ಗುಂಡು ಹಾರಿಸಿ ದರೋಡೆ ಮಾಡಿದ್ದಾರೆ.
ಸುಮಾರು 4-5 ಕೋಟಿ ರೂ. ಮೌಲ್ಯದ ಚಿನ್ನಾಭರಣ ದೋಚಿರುವ ದರೋಡೆಕೋರರು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾರೆ.
ಗುಂಡಿನ ದಾಳಿಯಿಂದ ತಪ್ಪಿಸಿಕೊಂಡ ಅಜ್ಗರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕೃತ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ದರೋಡೆಕೋರರ ಬಂಧನಕ್ಕೆ ಕಾರ್ಯಾಚರಣೆಗೆ ಇಳಿದಿದ್ದಾರೆ.

Call Now Button