Online News in ಕನ್ನಡ

ಸಚಿವ ಸ್ಥಾನದ ಆಕಾಂಕ್ಷಿಗಳ ನಿಯೋಗದಿಂದ ಸಿಎಂ ಸಿದ್ದರಾಮಯ್ಯ ಭೇಟಿ

ಬೆಂಗಳೂರು: ಬಜೆಟ್‌ ಅಧಿವೇಶನ ನಡೆಯುತ್ತಿರುವ ನಡುವೆಯೇ ಸುಮಾರು ೧೦ಕ್ಕೂ ಹೆಚ್ಚು ಕಾಂಗ್ರೆಸ್‌ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮಗೂ ಸಚಿವ ಸ್ಥಾನ ನೀಡಬೇಕೆಂದು ಮನವಿ ಮಾಡಿದ ರಾಜಕೀಯ ಬೆಳವಣಿಗೆ ನಡೆದಿದೆ.


ನಿಯೋಗದಲ್ಲಿ ಪ್ರಮುಖವಾಗಿ ಶಾಸಕರಾದ ಹ್ಯಾರಿಸ್‌, ಎ.ಆರ್.ಕೃಷ್ಣಮೂರ್ತಿ, ಬಾಲಕೃಷ್ಣ, ರಾಘವೇಂದ್ರ ಹಿಟ್ನಾಳ್‌ ಸೇರಿದಂತೆ ೧೦ಕ್ಕೂ ಹೆಚ್ಚು ಶಾಸಕರು ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ತಮ್ಮ ಸಚಿವ ಆಕಾಂಕ್ಷಿತನವನ್ನು ವ್ಯಕ್ತಪಡಿಸಿದರು. ಬಜೆಟ್‌ ಅಧಿವೇಶನದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಿ ಪಕ್ಷದ ವರಿಷ್ಠರನ್ನು ಭೇಟಿ ಮಡಿ ಸಚಿವ ಸಂಪುಟ ಪುನರ್‌ ರಚನೆಗೆ ಪ್ರಸ್ತಾವನೆಯನ್ನು ಮುಂದಿಡಲಿದ್ದಾರೆ.
ಈಗಾಗಲೇ ಸರಕಾರದ ಅರ್ಧ ಅವಧಿ ಮುಗಿದಿದ್ದು, ಇನ್ನುಳಿದ ಅವಧಿಗಾದರೂ ತಮ್ಮಗಳನ್ನು ಪರಿಗಣಿಸಬೇಕು. ಮೊದಲ ಅರ್ಧ ಅವಧಿಯ ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ಮಾಡಿಕೊಡಬೇಕೆಂದು ಮನವಿ ಮಾಡಿದ್ದಾರೆ. ಈನಡುವೆ, ಶಾಸಕರ ಮನವಿಯನ್ನು ತಾಳ್ಮೆಯಿಂದ ಆಲಿಸಿದ ಮುಖ್ಯಮಂತ್ರಿಗಳು ಹೈಕಮಾಂಡ್‌ ಸೂಚನೆಯಂತೆ ಎಲ್ಲ ನಡೆಯಲಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

Call Now Button