Online News in ಕನ್ನಡ

ಪ್ರಜಾಪ್ರಭುತ್ವ ದಿನಾಚರಣೆ; ಮೈಸೂರಿನಲ್ಲಿ ಸೈಕಲ್ ರ್ಯಾಲಿ

ಮೈಸೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಅಂತರಾಷ್ಟಿಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ “ನನ್ನ ಮತ ನನ್ನ ಹಕ್ಕು” ಎಂಬ ಶೀರ್ಷಿಕೆಯಡಿ “ನಮ್ಮ ಮೈಸೂರು ಬೈಕರ್ಸ್ ಕಮ್ಯುನಿಟಿ” ರವರ ವತಿಯಿಂದ ಸೈಕಲ್ ರ್ಯಾಲಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಯಿಂದ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕರಾದ ಮಂಜೇಗೌಡ ಹಾಗೂ ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮೀ ಕಾಂತ ರೆಡ್ಡಿ ಅವರು ಸೈಕಲ್ ರ್ಯಾಲಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಯುಕೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ರಂಗೇಗೌಡ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Call Now Button