ಬೆಂಗಳೂರು: ಇಲ್ಲಿನ ವಿಧಾನಸೌಧದ ಮುಂಭಾಗ ನಡೆದ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪ್ರಾದೇಶಿಕ ಹಾಗೂ ವಲಯ ಕಚೇರಿಗಳ ಬಳಕೆಗಾಗಿ 68 ಪರಿಸರ ಸ್ನೇಹಿ ಇವಿ ವಾಹನಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ, ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಶಾಸಕ ನರೇಂದ್ರಸ್ವಾಮಿ, ಅಧಿಕಾರಿಗಳು ಉಪಸ್ಥಿತರಿದ್ದರು.


