ಮೈಸೂರು : ಹುಣಸೂರು ತಾಲ್ಲೂಕು ಗೌಡನಕಟ್ಟೆ ಬಳಿ ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ನಗರದ ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿದ್ದ ಹುಲಿ ಮರಿಗಳು
ನಾಲ್ಕು ದಿನಗಳ ಅಂತರದಲ್ಲಿ ಸಾವನ್ನಪ್ಪಿವೆ ಎಂದು ಮೂಲಗಳು ತಿಳಿಸಿವೆ.
ಗೌಡನಕಟ್ಟೆಯ ಪ್ರಕಾಶ್ ಎಂಬುವರ ಜೋಳದ ಹೊಲದಲ್ಲಿ ನ.28ರಂದು ನಾಲ್ಕು ಮರಿಗಳೊಂದಿಗೆ ತಾಯಿ ಹುಲಿ ಕಾಣಿಸಿಕೊಂಡಿತ್ತು. ಮದ್ಯರಾತ್ರಿ ತಾಯಿ ಹುಲಿ ಸೆರೆಯಾಗಿತ್ತು.
ಎರಡು ದಿನಗಳ ನಂತರ ನ.30ರಂದು ನಾಲ್ಕು ಹುಲಿ ಮರಿಗಳು ಪತ್ತೆಯಾಗಿದ್ದವು.
ಹುಲಿ ಮರಿಗಳು ಸೆರೆ ಹಿಡಿಯುವ ವೇಳೆ ಜನರ ಕಿರುಚಾಟದಿಂದ ಗಾಬರಿಯಾಗಿದ್ದವು. ಎರಡು ದಿನ ತಾಯಿಯಿಂದ ದೂರವಾಗಿದ್ದ ಮರಿಗಳು ಆಹಾರವಿಲ್ಲದೆ ಬಳಲಿದ್ದವು.
ಜನರ ಕೂಗಾಟದಿಂದ ಓಡಾಡಿ ಸೆರೆ ಹಿಡಿಯುವ ವೇಳೆ ನಿತ್ರಾಣಗೊಂಡಿದ್ದವು. ತಕ್ಷಣವೇ ಸೂಕ್ತ ಚಿಕಿತ್ಸೆಗಾಗಿ ಪುನರ್ವಸತಿ ಕೇಂದ್ರಕ್ಕೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಗಾಬರಿಗೊಳಗಾಗಿದ್ದ ಮರಿಗಳು ಸರಿಯಾಗಿ ಆಹಾರ ಸೇವಿಸುತ್ತಿರಲಿಲ್ಲ ಎಂದು ಹೇಳಲಾಗಿದೆ. ಅಸ್ವಸ್ಥಗೊಂಡಿದ್ದ ಹುಲಿ ಮರಿಗಳು ಸಾವನ್ನಪ್ಪಿವೆ.
ನ.29 ಹಾಗೂ 30ರಂದು ಸೆರೆ ಸಿಕ್ಕಿದ್ದ ನಾಲ್ಕು ಹುಲಿ ಮರಿಗಳು ಸಾವನ್ನಪ್ಪಿವೆ. ಆದರೆ ತಾಯಿ ಹುಲಿ ಆರೋಗ್ಯದಿಂದಿದೆ
ಹುಲಿಮರಿಗಳ ಅಂಗಾಗಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಮರಿಗಳ ಅಂಗಾಂಗಗಳನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ವರದಿ ಬಂದ ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ
ಆದರೆ, ಹುಲಿ ಮರಿಗಳ ಸಾವಿನ ಬಗ್ಗೆ ಯಾರಿಗೂ ಮಾಹಿತಿ ನೀಡದ ಅರಣ್ಯ ಇಲಾಖೆ ಮಾಧ್ಯಮ ಪತ್ರಿನಿಧಿಗಳಿಂದ ಅಂತರ ಕಾಯ್ದುಕೊಂಡಿದ್ದಾರೆ.


